ಸೋಮವಾರ, ಸೆಪ್ಟೆಂಬರ್ 27, 2021
29 °C
ಜಿಲ್ಲೆಯಲ್ಲಿ ಮುಂದುವರಿದ ವಾರಾಂತ್ಯ ಕರ್ಫ್ಯೂ

ದ.ಕ: ಪಾಸಿಟಿವಿಟಿ ತಗ್ಗಿಸುವ ಸವಾಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ 390 ಜನರಿಗೆ ಕೋವಿಡ್ ದೃಢಪಟ್ಟಿದೆ. 333 ಜನರು ಗುಣಮುಖರಾಗಿದ್ದಾರೆ. ಮೃತಪಟ್ಟ ಮೂವರಲ್ಲಿ ಕೋವಿಡ್ ಇರುವುದು ಖಚಿತವಾಗಿದೆ.

ಜಿಲ್ಲೆಯಲ್ಲಿ ಲಾಕ್‌ಡೌಕ್ ನಿಯಮ ಸಡಿಲಿಕೆಯ ನಂತರ ನಿಧಾನವಾಗಿ ಪಾಸಿಟಿವಿ ದರ ಹೆಚ್ಚುತ್ತಿದೆ. ಬುಧವಾರ ಪಾಸಿಟಿವಿಟಿ ದರ ಶೇ 3.85 ಇದ್ದರೆ, ಗುರುವಾರ ಶೇ 4.25ರಷ್ಟು ಇತ್ತು. ಶುಕ್ರವಾರ ಶೇ 3.18ರಷ್ಟಿದೆ.

ನೆರೆಯ ಕೇರಳ ರಾಜ್ಯದಲ್ಲಿ ಪಾಸಿಟಿವಿಟಿ ದರ ಏರಿಕೆಯಾಗುತ್ತಿದೆ. ಕೇರಳದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ವ್ಯಾಪಾರ ವಹಿವಾಟು, ವಿದ್ಯಾಭ್ಯಾಸ, ಉದ್ಯೋಗದ ಕಾರಣಕ್ಕೆ ಜನರು ಬರುವ ಕಾರಣ ಜಿಲ್ಲೆಯಲ್ಲಿ ಸೋಂಕು ಹೆಚ್ಚುತ್ತಿದೆ ಎನ್ನಲಾಗುತ್ತಿದೆ. ಗಡಿಯಲ್ಲಿ ತಪಾಸಣೆ ಬಿಗಿಗೊಳಿಸಲಾಗಿದ್ದು, 72 ಗಂಟೆಗಳ ಒಳಗಿನ ಆರ್‌ಟಿಪಿಸಿಆರ್ ವರದಿ ಇದ್ದರಷ್ಟೇ ಗಡಿ ಪ್ರವೇಶಿಸಲು ದಕ್ಷಿಣ ಕನ್ನಡ ಜಿಲ್ಲಾಡಳಿತ ಅನುಮತಿ ನೀಡಿದೆ.

‘ನೆರೆಯ ರಾಜ್ಯದಲ್ಲಿ ಪಾಸಿಟಿವಿಟಿ ದರ ಹೆಚ್ಚಿದ್ದರೂ, ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಕ್ರಮವಹಿಸಿರುವ ಕಾರಣಕ್ಕೆ ಕೋವಿಡ್ ನಿಯಂತ್ರಣದಲ್ಲಿದೆ. ಜಿಲ್ಲೆಯಲ್ಲಿ ದೈನಂದಿನ ಕೋವಿಡ್ ಪರೀಕ್ಷೆಯನ್ನು ಅಧಿಕ ಪ್ರಮಾಣದಲ್ಲಿ ಮಾಡುತ್ತಿರುವುದರಿಂದ ಪಾಸಿಟಿವ್ ಪ್ರಕರಣಗಳು ಪತ್ತೆಯಾಗುತ್ತಿವೆ. ಪರೀಕ್ಷೆ ಹೆಚ್ಚು ಮಾಡಿ, ಸೋಂಕಿತರನ್ನು ಪತ್ತೆ ಹಚ್ಚಿದಾಗ ಮಾತ್ರ ರೋಗ ನಿಯಂತ್ರಣ ಸಾಧ್ಯವಾಗುತ್ತದೆ’ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಪ್ರತಿಕ್ರಿಯಿಸಿದ್ದಾರೆ.

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಶುಕ್ರವಾರ 644 ಜನರಿಗೆ ಕೋವಿಡ್ ದೃಢಪಟ್ಟಿದೆ. 625 ಜನರು ಗುಣಮುಖರಾಗಿದ್ದಾರೆ. 6,752 ಸಕ್ರಿಯ ಪ್ರಕರಣಗಳು ಇವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.