ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಕ್ಷಿಣ ಕನ್ನಡ | ಪರಾರಿಯಾಗಿದ್ದ ಸೋಂಕಿತನ ಬಂಧನ

Last Updated 7 ಜುಲೈ 2020, 5:30 IST
ಅಕ್ಷರ ಗಾತ್ರ

ಮಂಗಳೂರು: ವೆನ್ಲಾಕ್‌ ಆಸ್ಪತ್ರೆಯಿಂದ ಭಾನುವಾರ ಪರಾರಿಯಾಗಿದ್ದ ಕೋವಿಡ್‌–19 ಸೋಂಕಿತನನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಆತನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಮಂಗಳೂರಿನಲ್ಲಿ ನೆಲೆಸಿದ್ದ ಪುತ್ತೂರು ತಾಲ್ಲೂಕಿನ ದರ್ಬೆಯ ನಿವಾಸಿಯಾಗಿದ್ದ ವ್ಯಕ್ತಿಯಲ್ಲಿ ಕೋವಿಡ್‌ ಸೋಂಕಿನ ಲಕ್ಷಣಗಳಿದ್ದವು. ಪರೀಕ್ಷೆಗೆ ಗಂಟಲು ದ್ರವದ ಮಾದರಿ ನೀಡಿದ್ದ ಆತ, ಚಿಕಿತ್ಸೆಗಾಗಿ ವೆನ್ಲಾಕ್‌ ಕೋವಿಡ್‌ ಆಸ್ಪತ್ರೆಗೆ ದಾಖಲಾಗಿದ್ದ. ಭಾನುವಾರ ವರದಿ ಬಂದಿದ್ದು, ಸೋಂಕು ದೃಢಪಟ್ಟಿತ್ತು. ವಿಷಯ ತಿಳಿದ ಬಳಿಕ ಆಸ್ಪತ್ರೆಯಿಂದ ಪರಾರಿಯಾಗಿದ್ದ.

ಸೋಂಕಿತನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದ ಮಂಗಳೂರು ದಕ್ಷಿಣ (ಪಾಂಡೇಶ್ವರ) ಠಾಣೆ ಪೊಲೀಸರು, ಆತನ ಪತ್ತೆಗಾಗಿ ಶೋಧ ಆರಂಭಿಸಿದ್ದರು. ಸೋಮವಾರ ಮಧ್ಯಾಹ್ನ ಕಾನ್‌ಸ್ಟೆಬಲ್‌ಗಳಾದ ಶಂಕರಪ್ಪ ಲಮಾಣಿ ಮತ್ತು ಶಂಕರಪ್ಪ ನಂದ್ಯಾಲ್‌ ಅವರು ಸ್ಟೇಟ್‌ ಬ್ಯಾಂಕ್‌ ಬಸ್‌ ನಿಲ್ದಾಣದ ಬಳಿ ಸೋಂಕಿತನನ್ನು ಪತ್ತೆಹಚ್ಚಿ, ಬಂಧಿಸಿದ್ದಾರೆ ಎಂದು ನಗರ ಪೊಲೀಸ್‌ ಕಮಿಷನರ್‌ ವಿಕಾಸ್‌ ಕುಮಾರ್ ವಿಕಾಶ್‌ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT