ಮಂಗಳವಾರ, ಜೂನ್ 28, 2022
21 °C
46 ಲೀಟರ್ ಉತ್ಪಾದನಾ ಸಾಮರ್ಥ್ಯ

ವಾಮದಪದವು: ಜಿಲ್ಲೆಯ ಪ್ರಥಮ ಆಮ್ಲಜನಕ ಘಟಕ ಲೋಕಾರ್ಪಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬಂಟ್ವಾಳ: ‘ಜಿಲ್ಲೆಯ ಒಟ್ಟು ಎಂಟು ಆಮ್ಲಜನಕ ಘಟಕಗಳ ಪೈಕಿ ಗ್ರಾಮೀಣ ಪ್ರದೇಶ ವಾಮದಪದವು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಆಮ್ಲಜನಕ ಘಟಕ ಲೋಕಾರ್ಪಣೆಗೊಂಡಿದೆ. ಯೋಜನೆ ತ್ವರಿತ ಅನುಷ್ಠಾನಕ್ಕೆ ಸಂಸದ ನಳಿನ್ ಕುಮಾರ್ ಕಟೀಲು ಮತ್ತು ಶಾಸಕ ರಾಜೇಶ ನಾಯ್ಕ್ ಅವರು ಪರಿಶ್ರಮವೇ ಕಾರಣ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಘಟಕವು ಪ್ರತಿ ನಿಮಿಷಕ್ಕೆ 46 ಲೀಟರ್ ಆಮ್ಲಜನಕ ಉತ್ಪಾದಿಸುವ ಸಾಮರ್ಥ್ಯ ಹೊಂದಿದ್ದು, ಜಿಲ್ಲೆಯ ವಿವಿಧೆಡೆಗಳಲ್ಲಿ ಹಂತ ಹಂತವಾಗಿ ಇಂತಹ ಘಟಕ ಸ್ಥಾಪನೆಯಾಗಲಿದೆ ಎಂದರು.

ಕಿಯೋನಿಕ್ಸ್ ಅಧ್ಯಕ್ಷ ಕೆ.ಹರಿಕೃಷ್ಣ ಬಂಟ್ವಾಳ, ಜಿಲ್ಲಾ ಪಂಚಾಯಿತಿ ಸದಸ್ಯ ಎಂ.ತುಂಗಪ್ಪ ಬಂಗೇರ, ನೀರು ಸರಬರಾಜು ಮತ್ತು ಒಳಚರಂಡಿ ನಿಗಮದ ಸದಸ್ಯೆ ಸುಲೋಚನಾ ಜಿ.ಕೆ.ಭಟ್, ತಾಲ್ಲೂಕು ಪಂಚಾಯಿತಿ ಸದಸ್ಯ ಪ್ರಭಾಕರ ಪ್ರಭು, ಚೆನ್ನೈತ್ತೋಡಿ ಮತ್ತು ಕುಕ್ಕಿಪಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಭಾರತಿ ರಾಜೇಂದ್ರ ಪೂಜಾರಿ ಮತ್ತು ಅಧ್ಯಕ್ಷೆ ಸುಜಾತಾ ಆರ್. ಪೂಜಾರಿ, ಉಪಾಧ್ಯಕ್ಷ ಯೋಗೀಶ್ ಆಚಾರ್ಯ, ಬೂಡ ಅಧ್ಯಕ್ಷ ಬಿ.ದೇವದಾಸ್ ಶೆಟ್ಟಿ, ಬಿಜೆಪಿ ಕ್ಷೇತ್ರಾಧ್ಯಕ್ಷ ದೇವಪ್ಪ ಪೂಜಾರಿ, ಉಪ ವಿಭಾಗಾಧಿಕಾರಿ ಮದನ್ ಮೋಹನ್, ತಹಶಿಲ್ದಾರ್ ರಶ್ಮಿ. ಎಸ್. ಆರ್., ವೈದ್ಯಾಧಿಕಾರಿ ಡಾ.ಉಮೇಶ್ ಅಡ್ಯಾಂತಾಯ, ಎಂಜಿನಿಯರ್ ಕೃಷ್ಣ, ಡಾ. ಜಯಪ್ರಕಾಶ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು