ಶುಕ್ರವಾರ, 29 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವರ್ಷದೊಳಗೆ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಕಚೇರಿ ಸ್ಥಳಾಂತರ: ಭೈರೇಗೌಡ

ಜಿಲ್ಲಾ ಆಡಳಿತ ಸಂಕೀರ್ಣ ಪರಿಶೀಲಿಸಿದ ಕಂದಾಯ ಸಚಿವ ಕೃಷ್ಣ ಬೈರೆಗೌಡ
Published 29 ಆಗಸ್ಟ್ 2023, 9:22 IST
Last Updated 29 ಆಗಸ್ಟ್ 2023, 9:22 IST
ಅಕ್ಷರ ಗಾತ್ರ

ಮಂಗಳೂರು: 'ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಗೆ ಸಂಬಂಧಿಸಿದ ಎಲ್ಲ‌ ಆಡಳಿತ ಯಂತ್ರವನ್ನು ಹೊಸ‌ ಜಿಲ್ಲಾ ಆಡಳಿತ ಕಚೇರಿ ಸಂಕೀರ್ಣಕ್ಕೆ‌ ಒಂದು ವರ್ಷದ ಒಳಗೆ ಸ್ಥಳಾಂತರಿಸಲು ಕ್ರಮ ಕೈಗೊಳ್ಳುತ್ತೇವೆ' ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ತಿಳಿಸಿದರು.

ಪಡೀಲ್ ನಲ್ಲಿ ನಿರ್ಮಾಣವಾಗುತ್ತಿರುವ ಹೊಸ‌ ಜಿಲ್ಲಾ ಆಡಳಿತ ಕಚೇರಿ ಸಂಕೀರ್ಣಕ್ಕೆ ಮಂಗಳವಾರ ಭೇಟಿ ನೀಡಿದ ಅವರು ಕಾಮಗಾರಿ ಪರಿಶೀಲಿಸಿದರು.

ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, 'ಈ ಹಿಂದೆ ಕಾಂಗ್ರೆಸ್ ನೇತೃತ್ವದ ಸರ್ಕಾರ ಇದ್ದಾಗಲೇ ಜಿಲ್ಲಾಡಳಿತ ಕಚೇರಿ ಸಂಕೀರ್ಣಕ್ಕೆ ಮಂಜೂರಾತಿ ನೀಡಲಾಗಿತ್ತು. ಕ್ರಿಯಾಯೋಜನೆ‌ ತಯಾರಿಸಿದಾಗ ಎರಡು ಹಂತಗಳಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲು ಯೋಜಿಸಲಾಗಿತ್ತು. ಕಾಮಗಾರಿಯನ್ನು 2017-18 ರಲ್ಲಿ ಆರಂಭಿಸಲಾಗಿತ್ತು. ಇನ್ನೂ ಪೂರ್ಣಗೊಂಡಿಲ್ಲ. ಮೊದಲ‌ ಹಂತದಲ್ಲಿ ಮಂಜೂರಾದ ಅನುದಾನಕ್ಕಿಂತ ಹೆಚ್ಚು ವೆಚ್ಚ ಮಾಡಲಾಗಿದೆ. ಹಿಂದಿನ‌ ಬಿಜೆಪಿ ನೇತೃತ್ವದ ಸರ್ಕಾರ ಇದ್ದಾಗ ಇದನ್ನು ಪೂರ್ಣಗೊಳಿಸಲು ಕ್ರಮ‌ಕೈಗೊಂಡಿಲ್ಲ' ಎಂದರು. 'ಎರಡನೇ ಹಂತ‌ದ‌ ಕಾಮಗಾರಿಗೆ ಹಿಂದಿನ‌ ಸರ್ಕಾರದ ಅವಧಿಯಲ್ಲೇ ಮಂಜೂರಾತಿ ನೀಡಬೇಕಿತ್ತು‌. ನಮ್ಮ ಸರ್ಕಾರ ಇದನ್ನು ಪೂರ್ಣಗೊಳಿಸಲು ಬದ್ದ ಇದೆ' ಎಂದರು.

'ಕಚೇರಿ ಸಂಕೀರ್ಣದ ಹೊರಗಡೆ ಸುರಕ್ಷತಾ ದೃಷ್ಟಿಯಿಂದ ಅಗತ್ಯ ಇರುವ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸುತ್ತೇವೆ. ಅದಕ್ಕೆ‌ ತಕ್ಕಂತೆ ಅಂದಾಜುಪಟ್ಟಿ ತಯಾರಿಸಲು ಸೂಚನೆ ನೀಡಿದ್ದೇವೆ' ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT