ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚುನಾವಣೆಯಲ್ಲಿ ಬಿಜೆಪಿಗೆ ಜನರಿಂದ ತಕ್ಕಪಾಠ: ಕೆ.ಹರೀಶ್ ಕುಮಾರ್

Last Updated 10 ಮೇ 2022, 15:36 IST
ಅಕ್ಷರ ಗಾತ್ರ

ಮಂಗಳೂರು: ಬಿಜೆಪಿ ಸರ್ಕಾರದ ವೈಫಲ್ಯ ಹಾಗೂ ಭ್ರಷ್ಟಚಾರಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಜನರು ಭ್ರಮನಿರಸನಗೊಂಡಿದ್ದಾರೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವುದರ ಮೂಲಕ ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದಾರೆ. ಆ ನಿಟ್ಟಿನಲ್ಲಿ ಕಾರ್ಯಕರ್ತರೆಲ್ಲರೂ ಮುಂದಿನ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಹರೀಶ್ ಕುಮಾರ್ ಹೇಳಿದರು.

ಸೋಮವಾರ ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ನಡೆದ ಕಾಂಗ್ರೆಸ್ ಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಇತ್ತೀಚಿಗೆ ನಿಧನರಾದ ಕಾಂಗ್ರೆಸ್ ನಾಯಕಿ ಮೇಘನಾದಾಸ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಮಾಜಿ ಸಚಿವರಾದ ಬಿ.ರಮಾನಾಥ ರೈ, ಅಭಯಚಂದ್ರ ಜೈನ್, ಶಾಸಕ ಯು.ಟಿ.ಖಾದರ್, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ರಾಜ್ಯಸಭಾ ಮಾಜಿ ಸದಸ್ಯ ಬಿ.ಇಬ್ರಾಹಿಂ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಮಿಥುನ್ ರೈ, ಮಮತಾ ಗಟ್ಟಿ, ಧನಂಜಯ ಅಡ್ಪಂಗಾಯ, ಕಾರ್ಪೊರೇಟರ್ ಶಶಿಧರ್ ಹೆಗ್ಡೆ, ಬ್ಲಾಕ್ ಅಧ್ಯಕ್ಷರು ಇದ್ದರು. ಯು.ಎಚ್.ಖಾಲಿದ್ ಉಜಿರೆ, ನೀರಜ್ ಪಾಲ್ ಸಹಕರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT