ಸೋಮವಾರ, 7 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ದಕ್ಷಿಣ ಕನ್ನಡ: ಜಿಲ್ಲಾ ಮಟ್ಟದ ಕಬಡ್ಡಿ ಟೂರ್ನಿ

Published : 27 ಸೆಪ್ಟೆಂಬರ್ 2024, 14:07 IST
Last Updated : 27 ಸೆಪ್ಟೆಂಬರ್ 2024, 14:07 IST
ಫಾಲೋ ಮಾಡಿ
Comments

ಉಜಿರೆ: ಭಾರತದ ಗ್ರಾಮೀಣ ಕ್ರೀಡೆಯಾದ ಕಬಡ್ಡಿಗೆ ಒಲಿಂಪಿಕ್ಸ್‌ನಲ್ಲೂ ಅವಕಾಶ ನೀಡಬೇಕು ಎಂದು ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಪ್ರೊ.ಎಸ್.ಸತೀಶ್ಚಂದ್ರ ಹೇಳಿದರು.

ಎಸ್‌ಡಿಎಂ ಪದವಿಪೂರ್ವ ಕಾಲೇಜು ಮತ್ತು ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆ ಆಶ್ರಯದಲ್ಲಿ ಏರ್ಪಡಿಸಿರುವ ದಕ್ಷಿಣ ಕನ್ನಡ ಜಿಲ್ಲಾಮಟ್ಟದ ಬಾಲಕರ ಕಬಡ್ಡಿ ಟೂರ್ನಿಯನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು.

ಏಷಿಯನ್ ಗೇಮ್ಸ್‌ನಲ್ಲಿ ಭಾರತದ ಕ್ರೀಡಾಪಟುಗಳು ಕಬಡ್ಡಿ ಸ್ಪರ್ಧೆಯಲ್ಲಿ ಭಾಗವಹಿಸಿ ಹಲವು ಪದಕಗಳನ್ನು ಪಡೆದು ದೇಶಕ್ಕೆ ಕೀರ್ತಿ ತಂದಿದ್ದಾರೆ. ಹಾಗಾಗಿ ಒಲಿಂಪಿಕ್ಸ್‌ನಲ್ಲೂ ಅವಕಾಶ ಸಿಗಬೇಕು ಎಂದು ಅವರು  ಒತ್ತಾಯಿಸಿದರು.

ಬೆಳ್ತಂಗಡಿ ಪಿಎಸ್‌ಐ ಮುರಳೀಧರ ನಾಯಕ್ ಮಾತನಾಡಿದರು.

ಎಸ್‌ಡಿಎಂ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರೊ.ಬಿ.ಪ್ರಮೋದ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು.

ಪದವಿಪೂರ್ವ ಕಾಲೇಜಿನ ಉಪ ಪ್ರಾಂಶುಪಾಲ ರಾಜೇಶ್ ಸ್ವಾಗತಿಸಿದರು. ದೈಹಿಕ ಶಿಕ್ಷಣ ನಿರ್ದೇಶಕ ಸಂದೇಶ್ ಪೂಂಜ ವಂದಿಸಿದರು. ಮಹಾವೀರ ಜೈನ್ ಕಾರ್ಯಕ್ರಮ ನಿರ್ವಹಿಸಿದರು.

ದ.ಕ.ಜಿಲ್ಲೆಯ ಪಿಯು ಕಾಲೇಜುಗಳ 9 ತಂಡಗಳು ಟೂರ್ನಿಯಲ್ಲಿ ಭಾಗವಹಿಸುತ್ತಿವೆ.

ಕಸಾಯಿಖಾನೆಗೆ ದಾಳಿ: ಪ್ರಕರಣ ದಾಖಲು

ಉಜಿರೆ: ಕೊಕ್ಕಡ ಗ್ರಾಮದ ಮಲ್ಲಿಗೆಮಜಲು ಎಂಬಲ್ಲಿರುವ ಅಕ್ರಮ ಕಸಾಯಿಖಾನೆಗೆ ಧರ್ಮಸ್ಥಳ ಪೊಲೀಸರು ಗುರುವಾರ ದಾಳಿ ನಡೆಸಿ ಗೋಮಾಂಸ ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ.

ಕೊಕ್ಕಡದ ಮಲ್ಲಿಗೆಮಜಲು ಉಸ್ಮಾನ್ ಎಂಬುವರ ಅಡಿಕೆ ತೋಟದಲ್ಲಿ ಗೋಹತ್ಯೆ ಮಾಡಿ ಮಾಂಸ ಮಾರಾಟ ಮಾಡುತ್ತಿದ್ದ ಸ್ಥಳದಲ್ಲಿ 10 ಕೆ.ಜಿ. ಗೋಮಾಂಸ, ತೂಕದ ಯಂತ್ರ, ಚಾಕುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಧರ್ಮಸ್ಥಳ ಪೊಲೀಸ್ ಠಾಣಾಧಿಕಾರಿ ಕಿಶೋರ್, ಸಿಬ್ಬಂದಿ ದಾಳಿ ನಡೆಸಿದ್ದು, ಆರೋಪಿಗಳಾದ ಉಸ್ಮಾನ್ ಮತ್ತು ಸಲೀಂ ಪರಾರಿಯಾಗಿದ್ದು, ಅವರ ಮೇಲೆ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಪ್ರೊ.ಎಸ್.ಸತೀಶ್ಚಂದ್ರ ಅವರು ಕಬಡ್ಡಿ ಟೂರ್ನಿ ಉದ್ಘಾಟಿ ಮಾತನಾಡಿದರು
ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಪ್ರೊ.ಎಸ್.ಸತೀಶ್ಚಂದ್ರ ಅವರು ಕಬಡ್ಡಿ ಟೂರ್ನಿ ಉದ್ಘಾಟಿ ಮಾತನಾಡಿದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT