ಶನಿವಾರ, ಮೇ 28, 2022
31 °C

ದಕ್ಷಿಣ ಕನ್ನಡ: ಪಾದೆಕರ್ಯದ ಕೃಷಿಕ ದಂಪತಿ ಆತ್ಮಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪುತ್ತೂರು (ದಕ್ಷಿಣ ಕನ್ನಡ): ತಾಲ್ಲೂಕಿನ ಬಡಗನ್ನೂರು ಗ್ರಾಮದ ಪಾದೆಕರ್ಯದಲ್ಲಿ ಕೃಷಿಕ‌ ದಂಪತಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸುಬ್ರಹ್ಮಣ್ಯ ಭಟ್ (84) - ಶಾರದಾ ಭಟ್ (78) ಆತ್ಮಹತ್ಯೆ ಮಾಡಿಕೊಂಡ ದಂಪತಿ. ಇಬ್ಬರೂ ಭಾನುವಾರ ರಾತ್ರಿ ಊಟ ಮಾಡಿ ಮನೆಯ ಕೆಳಗಿನ ಅಂತಸ್ತಿನ ಕೋಣೆಯಲ್ಲಿ ಮಲಗಿದ್ದರು. ಪುತ್ರ, ಅವರ ಪತ್ನಿ ಮತ್ತು ಮಕ್ಕಳು ಮಹಡಿಯ ಕೋಣೆಯಲ್ಲಿ ಮಲಗಿದ್ದರು.

ಪುತ್ರ ಸೋಮವಾರ ಬೆಳಿಗ್ಗೆ ಎದ್ದು ನೋಡಿದಾಗ ದಂಪತಿ  ಪ್ರತ್ಯೇಕ ಕೋಣೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂದಿದೆ. ಘಟನಾ ಸ್ಥಳಕ್ಕೆ ಪುತ್ತೂರು ಸಂಪ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು