ಶುಕ್ರವಾರ, ಮಾರ್ಚ್ 31, 2023
22 °C

ಕಾಶಿಪಟ್ಣ ಶಾಲೆಯ ವಾರ್ಷಿಕೋತ್ಸವ, ಪ್ರತಿಭಾ ಪುರಸ್ಕಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳ್ತಂಗಡಿ: ತಾಲ್ಲೂಕಿನ ಕಾಶಿಪಟ್ಣ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಈಚೆಗೆ ನಡೆಯಿತು. ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಣೆ ನಡೆಯಿತು.

ಕಾಶಿಪಟ್ಣ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಿಲ್ಪಾ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಸತೀಶ್ ಕೆ. ಕಾಶಿಪಟ್ಣ, ಸದಸ್ಯರಾದ ಸುಶೀಲಾ, ಶುಭವಿ, ಪಡ್ಡಂದಡ್ಕ ಕ್ಲಸ್ಟರ್ ಮಟ್ಟದ ಸಂಪನ್ಮೂಲ ವ್ಯಕ್ತಿ ಆರತಿ ಕುಮಾರಿ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಪಿ.ಕೆ. ರಾಜು ಪೂಜಾರಿ, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷ ಶುಭಕರ ಕೋಟ್ಯಾನ್, ಹಳೆ ವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷ ಅಖ್ತರ್ ಅಹಮ್ಮದ್ ಹಾಸ್ಕೊ, ಕಾಶಿಪಟ್ಣ ಸರ್ಕಾರಿ ಶಾಲೆ ಉಳಿಸಿ ಬೆಳೆಸಿ ಸಮಿತಿಯ ಅಧ್ಯಕ್ಷ ಅಶೋಕ್ ಕೋಟ್ಯಾನ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಹರೀಶ್ ಕೆ. ಸಾಲ್ಯಾನ್ ಕಾಶಿಪಟ್ಣ, ಶಾಲಾ ಮುಖ್ಯಶಿಕ್ಷಕ  ಕೃಷ್ಣಪ್ಪ ನಾಯ್ಕ್ ಹಾಗೂ ಶಾಲಾ ನಾಯಕಿ ಲೋಶಿತಾ ಇದ್ದರು.

ಶಾಲಾ ಶಿಕ್ಷಕಿ ಪದ್ಮಶ್ರೀ ಜೈನ್ ಬರೆದಿರುವ ‘ಸ್ವರ ಗೊಂಚಲು’ ಕವನ ಸಂಕಲನವನ್ನು ಬಿಡುಗಡೆ ಮಾಡಲಾಯಿತು. ಪ್ರತಿಭಾನಿತ್ವ ವಿದ್ಯಾರ್ಥಿಗಳಿಗೆ ಮಂಗಳೂರು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಜಿನೇಂದ್ರ ಕೋಟ್ಯಾನ್ ಎಂ. ಅವರ ಕೊಡುಗೆಯಿಂದ ಪ್ರೋತ್ಸಾಹಧನ ವಿತರಿಸಲಾಯಿತು.

ಶಾಲಾ ವಾರ್ಷಿಕೋತ್ಸವದ ಅಂಗವಾಗಿ ವಿದ್ಯಾರ್ಥಿಗಳಿಗೆ ಮತ್ತು ಹಳೆ ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ, ಬಿಸಿಯೂಟ ಸಿಬ್ಬಂದಿಗಳಿಗೆ ನಡೆಸಲಾದ ವಿವಿಧ ಆಟೋಟ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಶಾಲೆಗೆ ಶೈಕ್ಷಣಿಕ ವರ್ಷದಲ್ಲಿ ಸಹಾಯಧನ ನೀಡಿದವರನ್ನು ಸನ್ಮಾನಿಸಲಾಯಿತು.

ಅಂಗನವಾಡಿ ಮತ್ತು ಶಾಲಾ ಮಕ್ಕಳ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು. ಹಳೆ ವಿದ್ಯಾರ್ಥಿಗಳಿಂದ ನೃತ್ಯ ಹಾಗೂ ಕ್ಯಾಪ್ಸಿ ಕೆಟರರ್ಸ್ ಮತ್ತು ಕ್ಯಾಪ್ಸಿ ಫ್ರೆಂಡ್ಸ್ ವತಿಯಿಂದ ‘ಬಂಗದ ಬದ್ಕ್’ ಕಿರು ನಾಟಕ ಮತ್ತು ತಾಂಬೂಲ ಕಲಾವಿದೆರ್ ಪುಂಜಾಲಕಟ್ಟೆ ಇವರಿಂದ ‘ಪರಿಮಳೆ ಕಾಲೊನಿ’ ಎಂಬ ನಾಟಕ ಪ್ರದರ್ಶನಗೊಂಡಿತು.

ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಹರೀಶ್ ಕೆ. ಸಾಲ್ಯಾನ್ ಕಾಶಿಪಟ್ಣ ಸ್ವಾಗತಿಸಿದರು. ಶಾಲಾ ಮುಖ್ಯಶಿಕ್ಷಕ ಕೃಷ್ಣಪ್ಪ ನಾಯ್ಕ್ ವರದಿ ವಾಚಿಸಿದರು. ಶಿಕ್ಷಕಿಯರಾದ ಭವ್ಯಾ ಎಚ್. ಜಿ. ಮತ್ತು ಪದ್ಮಶ್ರೀ ಜೈನ್ ಕಾರ್ಯಕ್ರಮ ನಿರೂಪಿಸಿದರು. ಹಳೆ ವಿದ್ಯಾರ್ಥಿ ಮನೋಜ್ ಕೋಟ್ಯಾನ್ ವಂಇಸಿದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು