ಬಂಟ್ವಾಳ: ಇಲ್ಲಿನ ಸಿದ್ಧಕಟ್ಟೆ ಕೋರ್ಯಾರು ಶ್ರೀದುರ್ಗಾ ಮಹಮ್ಮಾಯಿ ದೇವಸ್ಥಾನದಲ್ಲಿ ₹ 60ಲಕ್ಷ ವೆಚ್ಚದಲ್ಲಿ ಸುತ್ತು ಗೋಪುರ ನಿರ್ಮಾಣ ಮತ್ತು ಚಾವಣಿ ಅಳವಡಿಸಲಾಗಿದ್ದು, ಏ.26ರಿಂದ ಮೇ2ರವರೆಗೆ ಪುನರ್ ಪ್ರತಿಷ್ಠೆ ಬ್ರಹ್ಮಕಲಶೋತ್ಸವ ಮತ್ತು ಪರಿವಾರ ದೈವಗಳಿಗೆ ನೇಮೋತ್ಸವ ನಡೆಯಲಿದೆ ಎಂದು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಉಮೇಶ್ ಗೌಡ ಮಂಚಕಲ್ಲು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಏ.26ರಂದು ಮಧ್ಯಾಹ್ನ 3 ಗಂಟೆಗೆ ಸಿದ್ಧಕಟ್ಟೆ ನಲ್ಲೂರಂಗಡಿ ಬಸದಿಯಿಂದ ಹೊರೆಕಾಣಿಕೆ ಮೆರವಣಿಗೆ ನಡೆಯಲಿದೆ. ಕುಕ್ಕೆಸುಬ್ರಹ್ಮಣ್ಯದ ವಿದ್ಯಾಪ್ರಸನ್ನ ತೀರ್ಥಸ್ವಾಮೀಜಿ, ಸಂಗಬೆಟ್ಟು ವೀರಭದ್ರ ದೇವಸ್ಥಾನದ ಪ್ರಧಾನ ಅರ್ಚಕ ಪ್ರಭಾಕರ ಐಗಳ್, ವೈದ್ಯ ಡಾ.ಪ್ರಭಾಚಂದ್ರ ಜೈನ್, ವಲಯ ಬಿಲ್ಲವ ಸಂಘದ ಅಧ್ಯಕ್ಷ ಕಿರಣ್ ಕುಮಾರ್ ಮಂಜಿಲ, ಕೃಷಿಕ ಜಗತ್ಪಾಲ ಶೆಟ್ಟಿ ಉಮನೊಟ್ಟು, ಮಹಾವೀರ ಜೈನ್, ನಿತ್ಯಾನಂದ ಪೂಜಾರಿ ಕೆಂತಲೆ, ಸಂತೋಷ್ ಕುಮಾರ್ ಬೆಟ್ಟು, ಪ್ರಭಾಕರ ಆಚಾರ್ಯ, ಸದಾನಂದ ಕುಲಾಲ್ ಭಾಗವಹಿಸುವರು ಎಂದು ತಿಳಿಸಿದರು.

29ರಂದು ಬೆಳಿಗ್ಗೆ 10.27ಕ್ಕೆ ಪಂಚಲೋಹದ ದೇವಿಯ ಬಿಂಬ ಪ್ರತಿಷ್ಠೆ, ಮಧ್ಯಾಹ್ನ 3ಕ್ಕೆ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯಿಂದ ಆಶೀರ್ವದನ, ಸಂಜೆ 6ರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಏ.1ರಂದು ಬೆಳಿಗ್ಗೆ 10.45ಕ್ಕೆ ದೇವರಿಗೆ ಬ್ರಹ್ಮ ಕಲಶಾಭಿಷೇಕ ನಡೆಯಲಿದೆ ಎಂದು ವಿವರಿಸಿದರು. ಬೆಳಿಗ್ಗೆ 11.30ಕ್ಕೆ ಧಾರ್ಮಿಕ ಸಭೆಯಲ್ಲಿ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಕೆ.ಪ್ರಭಾಕರ ಭಟ್ ಕಲ್ಲಡ್ಕ, ಮಾಣಿಲ ಮೋಹನದಾಸ ಪರಮಹಂಸ ಸ್ವಾಮೀಜಿ, ಕಟೀಲು ಕ್ಷೇತ್ರದ ಕಮಲಾದೇವಿ ಪ್ರಸಾದ ಆಸ್ರಣ್ಣ, ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿ, ಕಾಂಗ್ರೆಸ್ ಮುಖಂಡ ಎಂ.ವೀರಪ್ಪ ಮೊಯಿಲಿ, ಸಂಸದ ಕ್ಯಾ. ಬ್ರಿಜೇಶ್ ಚೌಟ, ಕೋಟ ಶ್ರೀನಿವಾಸ ಪೂಜಾರಿ, ಸಚಿವ ದಿನೇಶ್ ಗುಂಡೂರಾವ್, ಪ್ರಮುಖರಾದ ಬಿ.ರಮಾನಾಥ ರೈ, ಬಿ. ನಾಗರಾಜ ಶೆಟ್ಟಿ, ಶಾಸ ಕರಾದ ಹರೀಶ್ ಪೂಂಜ, ಉಮಾನಾಥ ಕೋಟ್ಯಾನ್, ಬಿ.ಮಂಜುನಾಥ ಭಂಡಾರಿ, ಕಿಶೋರ್ ಕುಮಾರ್ ಪುತ್ತೂರು ಭಾಗವಹಿಸುವರು ಎಂದರು.

ಜೀರ್ಣೊದ್ಧಾರ ಸಮಿತಿ ಗೌರವಾಧ್ಯಕ್ಷರಾದ ಪ್ರಭಾಕರ ಪ್ರಭು, ದುರ್ಗಾದಾಸ್ ಶೆಟ್ಟಿ ಕರೆಂಕಿಜೆ, ಸಮಿತಿ ಅಧ್ಯಕ್ಷರಾದ ಗಂಗಾಧರ ಗೌಡ ಕುಕ್ಕೇಡಿ, ಗುರಿಕಾರ ಗೋಪಾಲ ಗೌಡ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260426-29-1322816307

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.