ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಗಳೂರಿನಲ್ಲಿ ಮುಂದುವರಿದ ಮಳೆ: ರಸ್ತೆ ಜಲಾವೃತ; ಅಲ್ಲಲ್ಲಿ ಭೂಕುಸಿತ

Last Updated 11 ಸೆಪ್ಟೆಂಬರ್ 2020, 5:14 IST
ಅಕ್ಷರ ಗಾತ್ರ

ಮಂಗಳೂರು: ಜಿಲ್ಲೆಯಲ್ಲಿ ಶುಕ್ರವಾರವೂ ಮಳೆ ಮುಂದುವರಿದಿದೆ. ಎರಡು ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು, ನಗರವೂ ಸೇರಿದಂತೆ ಜಿಲ್ಲೆಯ ಹಲವೆಡೆ ರಸ್ತೆಗಳು ಜಲಾವೃತವಾಗಿದ್ದವು.

ನಿರಂತರ ಮಳೆಯ ಪರಿಣಾಮ ಹಲವು ತಗ್ಗು ಪ್ರದೇಶಗಳು ಮುಳುಗಡೆಯಾಗಿದ್ದು, ಕುಂಟಿಕಾನ ಬಳಿ ರಸ್ತೆಯ ಪಕ್ಕ ಕುಸಿತವಾಗಿದೆ.

ನಗರದಲ್ಲಿ ಗುರುವಾರ ರಾತ್ರಿಯೂ ನಿರಂತರ ಮಳೆಯಾಗಿದೆ. ಕೊಟ್ಟಾರ ಚೌಕಿ, ಅಳಕೆ, ಅಶೋಕ್ ನಗರ, ಪಾಂಡೇಶ್ವರ ಭಾಗದಲ್ಲಿ ನೀರು ನಿಂತಿದ್ದು, ತಗ್ಗು ಪ್ರದೇಶಗಳು ಮುಳುಗಡೆಯಾಗಿದೆ.

ಕುಂಟಿಕಾನ ಬಳಿಯ ಬೋಂದೆಲ್‌ಗೆ ತೆರಳುವ ರಸ್ತೆಯ ಪಕ್ಕದಲ್ಲಿ ಭೂಕುಸಿತ ಉಂಟಾಗಿದೆ. ಇದರಿಂದ ಭಾಗಶಃ ರಸ್ತೆಗೆ ಹಾನಿಯಾಗಿದೆ.

ನಗರದ ದೇರೆಬೈಲ್ ಬಳಿ ರಸ್ತೆ ಬದಿಯ ಗೋಡೆ ಕುಸಿದು ಬಿದ್ದಿದೆ. ಹಲವು ಕಡೆ ರಸ್ತೆಗಳಲ್ಲಿ ನೀರು ನಿಂತಿದ್ದು, ವಾಹನ ಸವಾರರು ಸಂಕಷ್ಟಕ್ಕೆ ಒಳಗಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT