ಬುಧವಾರ, ಆಗಸ್ಟ್ 10, 2022
24 °C

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಅಬ್ಬರ ಇಳಿಮುಖ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ ದಿನವಿಡೀ ಸುರಿದ ಮಳೆಯ ಅಬ್ಬರ ಶುಕ್ರವಾರ ತುಸು ಕಡಿಮೆಯಾಗಿದೆ. ಗುರುವಾರ ಉಕ್ಕಿ ಹರಿದಿದ್ದ ಹಳ್ಳಕೊಳ್ಳಗಳಲ್ಲೂ ನೀರಿನ ಹರಿವಿನ ಪ್ರಮಾಣ ಕಡಿಮೆ ಇತ್ತು. ನೇತ್ರಾವತಿ, ಫಲ್ಗುಣಿ,  ನದಿಗಳು ತುಂಬಿ ಹರಿಯುತ್ತಿವೆ.

ಜುಲೈ 6ರವರೆಗೂ ನಿತ್ಯವೂ ಕರಾವಳಿ ಪ್ರದೇಶದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಭಾರಿ ಮಳೆಯ ಮುನ್ಸೂಚನೆ ಇದ್ದುದರಿಂದ ಜಿಲ್ಲೆಯಾದ್ಯಾಂತ ಶಾಲಾ ಕಾಲೇಜುಗಳಿಗೆ ಶುಕ್ರವಾರ ರಜೆ ಇತ್ತು. ಪಡೀಲ್‌–ಕಣ್ಣೂರಿನ ಬಳಿ ರಾಷ್ಟ್ರೀಯ ಹೆದ್ದಾರಿ ಪ್ರದೇಶದಲ್ಲಿ ಹಾಗೂ ಕೊಟ್ಟಾರ ಚೌಕಿ ಬಳಿ ಉಂಟಾಗಿದ್ದ ಪ್ರವಾಹವು ತಗ್ಗಿದೆ.

ಶುಕ್ರವಾರ ಬೆಳಿಗ್ಗೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ ಮೇರಮಜಲುವಿನಲ್ಲಿ 158 ಮಿ.ಮೀ ಹಾಗೂ ಫಜೀರುವಿನಲ್ಲಿ 144 ಮಿ.ಮೀ, ಮೂಡುಬಿದಿರೆಯಲ್ಲಿ 139 ಮಿ.ಮೀ ಮಳೆ ದಾಖಲಾಗಿದೆ. 

ಭಾರಿ ಮಳೆಯಿಂದಾಗಿ ಕಡಬದಲ್ಲಿ ಒಂದು ಮನೆ ಹಾನಿಗೊಂಡಿದೆ. ಮಂಗಳೂರು ಹಾಗೂ ಮೂಲ್ಕಿಯಲ್ಲಿ ತಲಾ ಒಂದು ಮನೆ ಭಾಗಶಃ ಹಾನಿಗೊಳಗಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು