ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಟೆರಿಟೊರಿಯಲ್ ವಾಟರ್ಸ್ (12 ನಾಟಿಕಲ್ ಮೈಲ್ವರೆಗಿನ) ಭಾಗದಲ್ಲಿ ಯಾವುದೇ ಬಲೆ, ಸಾಧನಗಳನ್ನು ಉಪಯೋಗಿಸಿ ಯಾಂತ್ರೀಕೃತ ದೋಣಿಗಳ ಮೂಲಕ ಹಾಗೂ 10 ಅಶ್ವಶಕ್ತಿ ಸಾಮರ್ಥ್ಯಕ್ಕಿಂತ ಮೇಲಿನ ಮೋಟರೀಕೃತ ದೋಣಿಗಳಲ್ಲಿ ಮೀನುಗಾರಿಕೆ ಕೈಗೊಳ್ಳುವುದನ್ನು ಜೂನ್ 1ರಿಂದ ಜುಲೈ 31ರವರೆಗೆ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಈ ಅವಧಿಯಲ್ಲಿ ಜಿಲ್ಲೆಯಲ್ಲಿ ದೋಣಿಯನ್ನು ಸಾಗಿಸುವ ಉದ್ದೇಶಕ್ಕಾಗಿ 10 ಅಶ್ವಶಕ್ತಿವರೆಗಿನ ಸಾಮರ್ಥ್ಯದ ಮೋಟರೀಕೃತ ದೋಣಿ ಮತ್ತು ಸಾಂಪ್ರದಾಯಿಕ ನಾಡದೋಣಿಗಳು ಮೀನುಗಾರಿಕೆಕೈಗೊಳ್ಳಲು ಅನುಮತಿ ನೀಡಲಾಗಿದೆ.

61 ದಿನಗಳ ಮೀನುಗಾರಿಕೆ ನಿಷೇಧದ ಅವಧಿಯಲ್ಲಿ ನಿಯಮ ಉಲ್ಲಂಘಿಸುವ ಮೀನುಗಾರಿಕಾ ದೋಣಿಗಳು ಮತ್ತು ಮೀನುಗಾರರಿಗೆ ಕರ್ನಾಟಕ ಕಡಲ ಮೀನುಗಾರಿಕೆ ಕಾಯ್ದೆ-1986ರ ಅಡಿಯಲ್ಲಿ ದಂಡ ವಿಧಿಸಲಾಗುತ್ತದೆ. ಅಲ್ಲದೆ, ಅಂತಹವರು ಒಂದು ವರ್ಷದ ಅವಧಿಗೆ ರಾಜ್ಯ ಮಾರಾಟ ಕರ ರಹಿತ ಡೀಸೆಲ್ ಪಡೆಯಲು ಅನರ್ಹರಾಗುತ್ತಾರೆ ಎಂದು ಮೀನುಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-29-1288456002

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.