ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಲೆಯಲ್ಲಿ ಪಾಠ: ಮಕ್ಕಳಿಗೆ ಸಂಭ್ರಮ

8, 9 ಮತ್ತು 10ನೇ ಕ್ಲಾಸ್‌ಗೆ ಭೌತಿಕ ತರಗತಿ ಪ್ರಾರಂಭ
Last Updated 18 ಸೆಪ್ಟೆಂಬರ್ 2021, 2:58 IST
ಅಕ್ಷರ ಗಾತ್ರ

ಮಂಗಳೂರು: ಜಿಲ್ಲೆಯಲ್ಲಿ ಶುಕ್ರವಾರದಿಂದ 8, 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ ಭೌತಿಕ ತರಗತಿಗಳು ಆರಂಭಗೊಂಡಿವೆ. ಮೊದಲ ದಿನ ಶೇ 52ರಷ್ಟು ವಿದ್ಯಾರ್ಥಿಗಳು ತರಗತಿಗೆ ಹಾಜರಾಗಿದ್ದರು ಎಂದು ಡಿಡಿಪಿಐ ಮಲ್ಲೇಸ್ವಾಮಿ ತಿಳಿಸಿದ್ದಾರೆ.

ಎಲ್ಲ ಶಾಲೆಗಳಲ್ಲಿ ಕೋವಿಡ್ ನಿಯಮಗಳನ್ನು ಪಾಲಿಸಿ ತರಗತಿಗಳನ್ನು ಪ್ರಾರಂಭಿಸಲಾಗಿದೆ. ಅನೇಕ ತಿಂಗಳುಗಳ ನಂತರ ಶಾಲೆಗೆ ಬಂದ ಮಕ್ಕಳು, ಖುಷಿಯಿಂದ ತರಗತಿಯಲ್ಲಿ ಕುಳಿತು ಪಾಠ ಕೇಳಿದರು. 170 ಸರ್ಕಾರಿ ಪ್ರೌಢಶಾಲೆಗಳು, 114 ಅನುದಾನಿತ ಪ್ರೌಢಶಾಲೆಗಳು ಹಾಗೂ 251 ಅನುದಾನ ರಹಿತ ಪ್ರೌಢಶಾಲೆಗಳಲ್ಲಿ ಭೌತಿಕ ತರಗತಿಗಳು ಆರಂಭಗೊಂಡಿವೆ. ಒಂದೆರಡು ಹಾಸ್ಟೆಲ್‌ಗಳನ್ನು ಹೊರತುಪಡಿಸಿ, ಇನ್ನುಳಿದ ಎಲ್ಲ ಶಾಲೆಗಳು, ಹಾಸ್ಟೆಲ್‌ಗಳಿಗೆ ಮಕ್ಕಳು ಬಂದಿದ್ದಾರೆ. ಸೆ.20ರಿಂದ 6 ಮತ್ತು 7ನೇ ತರಗತಿಗಳಿಗೆ ಭೌತಿಕ ತರಗತಿಗಳು ಪ್ರಾರಂಭವಾಗುತ್ತವೆ’ ಎಂದು ಅವರು ಪ್ರತಿಕ್ರಿಯಿಸಿದರು.

ಕಾಲಕಾಲಕ್ಕೆ ಶಿಕ್ಷಕರು ಹಾಗೂ ಶಾಲಾ ಸಿಬ್ಬಂದಿ ಕೋವಿಡ್ ಪರೀಕ್ಷೆ ನಡೆಸಬೇಕು ಮತ್ತು ಎರಡನೇ ಡೋಸ್ ಕೋವಿಡ್ ತಡೆ ಲಸಿಕೆ ಪಡೆದಿರಬೇಕು. ಕೇರಳದಿಂದ ಬಂದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ನಿಲಯಗಳಲ್ಲಿ ಉಳಿದುಕೊಳ್ಳಲು ವ್ಯವಸ್ಥೆ ಮಾಡಬೇಕು ಎಂದು ಜಿಲ್ಲಾಡಳಿತ ನೀಡಿದ್ದ ಸೂಚನೆಯನ್ನು ಪಾಲಿಸಲಾಗಿದೆ ಎಂದು ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT