ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: 132 ಕೆ.ಜಿ ಗಾಂಜಾ ವಶ- ಇಬ್ಬರ ಬಂಧನ

ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ನಗರಕ್ಕೆ, ಭಾರಿ ಪ್ರಮಾಣದಲ್ಲಿ ಗಾಂಜಾವನ್ನು ಕಳ್ಳಸಾಗಾಟ ಮಾಡುತ್ತಿದ್ದ ಜಾಲ
Last Updated 18 ನವೆಂಬರ್ 2022, 8:44 IST
ಅಕ್ಷರ ಗಾತ್ರ

ಮಂಗಳೂರು: ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ನಗರಕ್ಕೆ, ಭಾರಿ ಪ್ರಮಾಣದಲ್ಲಿ ಗಾಂಜಾವನ್ನು ಕಳ್ಳಸಾಗಾಟ ಮಾಡುತ್ತಿದ್ದ ಜಾಲವನ್ನು ಸಿಸಿಬಿ ಪೊಲೀಸರು ಭೇದಿಸಿದ್ದಾರೆ. ಮಹೇಂದ್ರ ಎಕ್ಸ್ ಯುವಿ 500 ಕಾರಿನಲ್ಲಿ ನಗರಕ್ಕೆ ಸಾಗಿಸಿದ್ದ 132 ಕೆ ಜಿ ಗಾಂಜಾವನ್ನು ಸಿಸಿಬಿ ಪೊಲೀಸರು ಗುರುವಾರ ವಶಪಡಿಸಿಕೊಂಡಿದ್ದಾರೆ.

ನಗರಕ್ಕೆ ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಮಹೇಂದ್ರ ಎಕ್ಸ್ ಯುವಿ 500 ಕಾರಿನಲ್ಲಿ ಗಾಂಜಾವನ್ನು ಸಾಗಣೆ ಆಗುತ್ತಿರುವ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಮಂಗಳೂರು ಸಿಸಿಬಿ ಇನ್ಸ್ಪೆಕ್ಟರ್ ಮಹೇಶ್ ಪ್ರಸಾದ್, ಪಿಎಸ್ಐ ರಾಜೇಂದ್ರ ಬಿ. ನೇತೃತ್ವದ ಸಿಸಿಬಿ ಪೊಲೀಸರ ತಂಡವು ಮುಡಿಪು ಕುರ್ನಾಡು ಗ್ರಾಮದ ಕಾಯರ್ ಗೋಳಿ ಎಂಬಲ್ಲಿ ಕಾರನ್ನು ತಡೆದು ತಪಾಸಣೆ ನಡೆಸಿತ್ತು. ಅದರಲ್ಲಿ ಅಕ್ರಮವಾಗಿ ಸಾಗಿಸಿದ್ದ ಗಾಂಜಾಪತ್ತೆಯಾಗಿತ್ತು. ಆರೋಪಿಗಳಾದ ಬಂಟ್ವಾಳ ನರಿಂಗಾನ ಗ್ರಾಮದ ರಮೀಜ್ ರಾಜ್ (30) ಹಾಗೂ ಕೇರಳದ ಕಾಸರಗೋಡು ಜಿಲ್ಲೆಯ ಮೀಯಪದವು ನಿವಾಸಿಅಬ್ದುಲ್ ಖಾದರ್ ಹ್ಯಾರಿಸ್ (31), ಬಂಧಿತರು. ಕೃತ್ಯಕ್ಕೆ ಬಳಸಿದ್ದ ಬಿಳಿ ಬಣ್ಣದ ಮಹೇಂದ್ರ ಎಕ್ಸ್ ಯುವಿ500 ಕಾರನ್ನು, ಎರಡು ಮೊಬೈಲ್ ಫೋನ್ ಗಳನ್ನು, 3 ತಲವಾರುಗಳನ್ನು, ಹಾಗೂ ₹2180 ನಗದನ್ನು ಸ್ವಾಧೀನಪಡಿಸಿಕೊಂಡಿದ್ದಾರೆ. ಸ್ವಾಧೀನಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸ್ವತ್ತುಗಳ ಒಟ್ಟು ಮೌಲ್ಯ ₹39,15,000 ಎಂದು ಅಂದಾಜಿಸಲಾಗಿದೆ.

'ಆರೋಪಿಗಳು ವಿಶಾಖಪಟ್ಟಣದಿಂದ ಗಾಂಜಾವನ್ನು ಕಾರಿನಲ್ಲಿರಿಸಿಬೆಂಗಳೂರು ಮೂಲಕ ಸಾಗಾಟ ಮಾಡಿದ್ದರು. ಅಕ್ರಮ ಗಾಂಜಾ ಸಾಗಾಟದ ಸಮಯದಲ್ಲಿ ಪೊಲೀಸರು ಅಥವಾ ಸಾರ್ವಜನಿಕರು ನಿಲ್ಲಿಸಿದ್ದಲ್ಲಿ, ಅವರಿಗೆ ತೊಂದರೆ ನೀಡುವ ಉದ್ದೇಶದಿಂದ ತಲವಾರುಗಳನ್ನು ಕಾರಿನಲ್ಲಿ ಹೊಂದಿದ್ದರು. ಈ ಬಗ್ಗೆ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.

'ಆರೋಪಿಗಳಲ್ಲಿ ರಮೀಜ್ ರಾಜ್ ಎಂಬಾತನ ವಿರುದ್ಧ ಕೊಣಾಜೆ ಪೊಲೀಸ್ ಠಾಣೆಯಲ್ಲಿ ದಾಖಲಾದ ಮಾದಕ ದ್ರವ್ಯ ಸೇವನೆಗೆ ಸಂಬಂಧಪಟ್ಟಂತಹ ಪ್ರಕರಣ, ಗಾಂಜಾ ಮಾರಾಟ ಮಾಡಿದ ಪ್ರಕರಣ, ಹಲ್ಲೆ ಪ್ರಕರಣ, ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದಾಖಲಾದ ಗಾಂಜಾ ಮಾರಾಟಕ್ಕೆ ಸಂಬಂಧಪಟ್ಟ ಪ್ರಕರಣ ಹಾಗೂ ಕೊಲೆ ಯತ್ನ ಪ್ರಕರಣ ಮತ್ತು ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಗಾಂಜಾ ಮಾರಾಟದ ಪ್ರಕರಣ ಸೇರಿ ಒಟ್ಟು 6 ಪ್ರಕರಣಗಳು ದಾಖಲಾಗಿರುತ್ತವೆ.

ಆರೋಪಿ ಅಬ್ದುಲ್ ಖಾದರ್ ಹ್ಯಾರಿಸ್ ವಿರುದ್ದ ಕೊಲೆ ಯತ್ನಕ್ಕೆ ಸಂಬಂಧಿಸಿದ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ, ಎರಡು ಪ್ರಕರಣಗಳು ಹಾಗೂ ಕಾಸರಗೋಡು ಜಿಲ್ಲೆಯ ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ಹಲ್ಲೆ ಸಂಬಂಧ ದಾಖಲಾಗಿದ್ದ ಎರಡು ಪ್ರಕರಣಗಳು ಸೇರಿ ಒಟ್ಟು ನಾಲ್ಕು ಪ್ರಕರಣಗಳು ದಾಖಲಾಗಿರುತ್ತದೆ.

ಆರೋಪಿಗಳಿಬ್ಬರೂ ಕರ್ನಾಟಕ, ಕೇರಳದಲ್ಲಿ ಸಾರ್ವಜನಿಕರಿಗೆ ಮಾದಕ ವಸ್ತುವಾದ ಗಾಂಜಾವನ್ನು ಮಾರಾಟ ಮಾಡುವ ಉದ್ದೇಶದಿಂದ ಬಾಡಿಗೆಗೆ ಕಾರನ್ನು ಪಡೆದುಕೊಂಡು ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಗಾಂಜಾವನ್ನು ಖರೀದಿಸಿ ಬೆಂಗಳೂರಿಗೆ, ಮಂಗಳೂರಿಗೆ ಹಾಗೂಕೇರಳಕ್ಕೆ ಸಾಗಾಟ ಮಾಡುತ್ತಿದ್ದರು. ಈ ಗಾಂಜಾ ಮಾರಾಟ ಹಾಗೂ ಸಾಗಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಆ ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ. ಈ ಬಗ್ಗೆ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ತನಿಖೆಗಾಗಿ ಪೊಲೀಸ್ ಕಸ್ಟಡಿಗೆ ಪಡೆಯಲಾಗುವುದು ಎಂದು ನಗರ ಪೊಲೀಸ್ ಕಮಿಷನರ್ ಶಶಿಕುಮಾರ್ ತಿಳಿಸಿದರು.

ಗಾಂಜಾ ಮಾರಾಟ/ಸಾಗಾಟದ ಭಾರಿ ಜಾಲದ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಪೊಲೀಸ್ ಇನ್ಸ್ಪೆಕ್ಟರ್ ಮಹೇಶ್ ಪ್ರಸಾದ್, ಪಿಎಸ್ಐ ರಾಜೇಂದ್ರ ಬಿ, ಎಎಸ್ಐಯವರಾದ ಶಶಿಧರ ಶೆಟ್ಟಿ, ಮೋಹನ್ ಕೆ ವಿ, ಹರೀಶ ಪಿ ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT