ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದ.ಕ: ಪಾಸಿಟಿವಿಟಿ ದರ ಶೇ 1.74ಕ್ಕೆ ಇಳಿಕೆ

Last Updated 5 ಜುಲೈ 2021, 4:40 IST
ಅಕ್ಷರ ಗಾತ್ರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ ಶೇ 5ಕ್ಕಿಂತ ಕಡಿಮೆ ಇರುವುದರಿಂದ ಸರ್ಕಾರದ ಆದೇಶದಂತೆ ಹೆಚ್ಚುವರಿ ಚಟುವಟಿಕೆಗಳಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ತಿಳಿಸಿದ್ದಾರೆ.

ಎಲ್ಲ ಅಂಗಡಿಗಳು, ರೆಸ್ಟೋರೆಂಟ್‌ಗಳು, ಮಾಲ್‌ಗಳು, ಖಾಸಗಿ ಕಚೇರಿಗಳಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ ಅಡಿಯಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ. ಎಲ್ಲ ಶಿಕ್ಷಣ ಸಂಸ್ಥೆಗಳು, ಟ್ಯುಟೋರಿಯಲ್‌, ಕಾಲೇಜುಗಳು ಮುಂದಿನ ಆದೇಶದವರೆಗೆ ಮುಚ್ಚಿರುತ್ತವೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾನುವಾರ 154 ಜನರಿಗೆ ಕೋವಿಡ್ ದೃಢಪಟ್ಟಿದೆ. ಮೃತಪಟ್ಟಿರುವ ಎಂಟು ಜನರಲ್ಲಿ ಕೋವಿಡ್ ಇರುವುದು ಖಚಿತವಾಗಿದೆ. 497 ಜನರು ಗುಣಮುಖರಾಗಿದ್ದಾರೆ. ಜಿಲ್ಲೆಯ ಪಾಸಿಟಿವಿಟಿ ದರ ಶೇ 1.74ಕ್ಕೆ ಇಳಿಕೆಯಾಗಿದೆ.

ಉಡುಪಿ: ಜಿಲ್ಲೆಯಲ್ಲಿ ಭಾನುವಾರ 28 ಜನರಿಗೆ ಕೋವಿಡ್ ದೃಢಪಟ್ಟಿದೆ. 130 ಜನರು ಗುಣಮುಖರಾಗಿದ್ದಾರೆ. ಇಬ್ಬರು ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ 821 ಸಕ್ರಿಯ ಪ್ರಕರಣಗಳು ಇವೆ.

ಕಾಸರಗೋಡು: ನೆರೆಯ ಕಾಸರಗೋಡು ಜಿಲ್ಲೆಯಲ್ಲಿ ಭಾನುವಾರ 593 ಮಂದಿಗೆ ಕೋವಿಡ್ ದೃಢಪಟ್ಟಿದೆ. 150 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ 6017 ಸಕ್ರಿಯ ಪ್ರಕರಣಗಳು ಇವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT