ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ರೈತರ ಬಲಿಗೆ ಬಿಜೆಪಿ ಸಿದ್ಧತೆ: ರಮಾನಾಥ ರೈ

ಬಂಟ್ವಾಳ: ಗೃಹ ಸಚಿವರ ಹೇಳಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ
Last Updated 1 ಜನವರಿ 2023, 7:02 IST
ಅಕ್ಷರ ಗಾತ್ರ

ಬಂಟ್ವಾಳ: ‘ವಿಧಾನಸಭೆಯಲ್ಲಿ ಅಡಿಕೆ ಬೆಳೆ ಮತ್ತು ಅಡಿಕೆ ಬೆಳೆಗಾರರ ಬಗ್ಗೆ ಹಗುರವಾಗಿ ಮಾತನಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಹೇಳಿಕೆ ವಿರುದ್ಧ ಖಂಡನೆ ವ್ಯಕ್ತಪಡಿಸದೆ ಮೌನವಾಗಿರುವ ಕರಾವಳಿ ಜಿಲ್ಲೆಯ ಬಿಜೆಪಿ ಶಾಸಕರಿಗೆ ಅಡಿಕೆ ಬೆಳೆಗಾರರ ಶಾಪ ತಟ್ಟಲಿದೆ’ ಎಂದು ಕಾಂಗ್ರೆಸ್‌ ಮುಖಂಡ ಬಿ.ರಮಾನಾಥ ರೈ ಆಕ್ರೋಶ ವ್ಯಕ್ತಪಡಿಸಿದರು.

ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ಕಿಸಾನ್ ಕಾಂಗ್ರೆಸ್ ಸಮಿತಿ ವತಿಯಿಂದ ಬಿ.ಸಿ.ರೋಡಿನಲ್ಲಿ ಶನಿವಾರ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

‘ಭೂ ಮಸೂದೆ ಕಾಯ್ದೆ ಬಳಿಕ ಕರಾವಳಿ ಭಾಗದಲ್ಲಿ ಗರಿಷ್ಠ ಸಂಖ್ಯೆಯ ಅಡಿಕೆ ಬೆಳೆಗಾರರು ಸ್ವಾವಲಂಬಿ ಜೀವನ ನಡೆಸುತ್ತಿದ್ದಾರೆ. ಕೊಳೆ ರೋಗ ಮತ್ತಿತರ ಸಂಕಷ್ಟದ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಅವರಿಗೆ ಬೆಂಬಲ ನೀಡುತ್ತಾ ಬಂದಿದೆ. ಆದರೆ, ‘ರಾಜ ವ್ಯಾಪಾರಿ ಆದರೆ ಪ್ರಜೆಗಳು ಭಿಕಾರಿ ಆಗುತ್ತಾರೆ’ ಎಂಬಂತೆ ದೇಶದಲ್ಲಿ ರೈತರನ್ನು ಬಲಿ ಕೊಡಲು ಬಿಜೆಪಿ ನೇತೃತ್ವದ ಕೇಂದ್ರ ಮತ್ತು ರಾಜ್ಯ ಸರ್ಕಾರ ಮುಂದಾಗಿದೆ’ ಎಂದು ಆರೋಪಿಸಿದರು.

ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಮಾಜಿ ಸದಸ್ಯ ಪಿಯೂಸ್ ಎಲ್.ರಾಡ್ರಿಗಸ್, ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಬೇಬಿ ಕುಂದರ್ ಮತ್ತು ಸುದೀಪ್ ಕುಮಾರ್ ಶೆಟ್ಟಿ, ಜಿಲ್ಲಾ ಕಿಸಾನ್ ಕಾಂಗ್ರೆಸ್ ಘಟಕ ಅಧ್ಯಕ್ಷ ಮೋಹನ ಗೌಡ ಕಲ್ಮಂಜ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಚಂದ್ರಪ್ರಕಾಶ ಶೆಟ್ಟಿ, ಎಂ.ಎಸ್.ಮಹಮ್ಮದ್ ಮಾತನಾಡಿದರು.

ಪ್ರಮುಖರಾದ ಕೆ.ಪದ್ಮನಾಭ ರೈ, ಅಬ್ಬಾಸ್ ಆಲಿ, ಸದಾಶಿವ ಬಂಗೇರ, ಸುಭಾಶ್ಚಂದ್ರ ಶೆಟ್ಟಿ, ಸಂಪತ್ ಕುಮಾರ್ ಶೆಟ್ಟಿ, ಬಿ.ಮೋಹನ್, ಸುಧಾಕರ ಶೆಣೈ ಖಂಡಿಗ, ವೆಂಕಪ್ಪ ಪೂಜಾರಿ, ನವಾಜ್ ಬಡಕಬೈಲು, ಚಿತ್ತರಂಜನ್ ಶೆಟ್ಟಿ, ಆಲ್ಫೋನ್ಸ್ ಮಿನೇಜಸ್, ವಾಸು ಪೂಜಾರಿ, ಆಲ್ಬರ್ಟ್‌ ಮಿನೇಜಸ್, ಉಮೇಶ ಬೋಳಂತೂರು, ಪುರಸಭಾ ಅಧ್ಯಕ್ಷ ಮಹಮ್ಮದ್ ಶರೀಫ್, ಉಪಾಧ್ಯಕ್ಷೆ ಜೆಸಿಂತ ಡಿಸೋಜ, ಮಾಜಿ ಅಧ್ಯಕ್ಷೆ ಜಾಸ್ಫಿನ್ ಡಿಸೋಜ, ಜಯಂತಿ ಪೂಜಾರಿ, ವಿಲ್ಮಾ ಮೊರಾಸ್, ಮಲ್ಲಿಕಾ ಶೆಟ್ಟಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT