ಮಂಗಳೂರು: ‘ಪೊಲೀಸರ ಕರ್ತವ್ಯ ನಿರ್ವಹಣೆಗೆ ಯಾರಾದರೂ ಅಡ್ಡಿಪಡಿಸಿದರೆ, ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿದ್ದೇವೆ’ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಅರುಣ್ ಎಚ್ಚರಿಕೆ ನೀಡಿದ್ದಾರೆ.

ಕಡಬ ಠಾಣೆಯಲ್ಲಿ ಕೆಲವರು ಭಾನುವಾರ ರಾತ್ರೋ ರಾತ್ರಿ ಪ್ರತಿಭಟನೆ ನಡೆಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ‘ಮಂಗಳೂರು ನಗರ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ವ್ಯಾಪ್ತಿಯಲ್ಲಿ ಕೆಲವು ಹತ್ಯೆಗಳಿಂದಾಗಿ ತಿಂಗಳಿನಿಂದ ಈಚೆಗೆ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಹತ್ತು ವರ್ಷಗಳ ಈಚೆಗೆ ನಡೆದಿರುವ ಇಂತಹ ಹತ್ಯೆಗಳನ್ನು ವಿಶ್ಲೇಷಿಸಿದಾಗ, ಅವುಗಳ ಆರೋಪಿಗಳು ಕೋಮುವಾದಿ ಸಂಘಟನೆಗಳ ಸಂಪರ್ಕದಲ್ಲಿದ್ದುದು ಕಂಡುಬಂದಿದೆ. ಮುನ್ನೆಚ್ಚರಿಕಾ ಕ್ರಮವಾಗಿ, ಕೋಮುವಾದಿ ಸಂಘಟನೆಗಳು ಮುಖಂಡರ ಪಟ್ಟಿ ತಯಾರಿಸಿ, ಅವರ ದೈನಂದಿನ ಚಟುವಟಿಕೆ ಹಾಗೂ ಅವರು ಎಲ್ಲೆಲ್ಲಿರುತ್ತಾರೆ ಎಂಬ ಬಗ್ಗೆ ಪರಿಶೀಲಿಸಲು ಕ್ರಮವಹಿಸಿದ್ದೆವು. ಈ ಕ್ರಮ ಕೈಗೊಂಡಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಕೆಲವರು ಕಡಬ ಪೊಲೀಸ್ ಠಾಣೆ ಮುಂದೆ ಅಕ್ರಮವಾಗಿ ಗುಂಪು ಸೇರಿ ಪ್ರತಿಭಟನೆ ನಡೆಸಿದ್ದಾರೆ. ಈ ಬಗ್ಗೆ ಕಡಬ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಲಿದ್ದೇವೆ’ ಎಂದು ಅವರು ತಿಳಿಸಿದರು.

‘ಕಡಬ ಠಾಣೆಯ ಬಳಿ ಪ್ರತಿಭಟನೆ ನಡೆಸಿದವರು, ತಮ್ಮ ಕುಟುಂಬದ ಸದಸ್ಯರನ್ನೂ ಕರೆ ತರುವುದಾಗಿ ಹೇಳಿದ್ದಾರೆ. ಕುಟುಂಬದ ಸದಸ್ಯರನ್ನು ಕರೆ ತಂದು ಪ್ರತಿಭಟನೆ ನಡೆಸಿದರೆ, ಅವರ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಲಿದ್ದೇವೆ’ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

‘ಮುನ್ನೆಚ್ಚರಿಕಾ ಕ್ರಮವಾಗಿ ಕೋಮುವಾದಿ ಸಂಘಟನೆಗಳ ಮುಖಂಡರ ಚಲನವಲನ ಗಮನಿಸುವ ಕರ್ತವ್ಯಕ್ಕೆ ಅಡ್ಡಿಪಡಿಸಿದರೆ, ಮುಂದೆಯೂ ಕಾನೂನು ಕ್ರಮ ಕೈಗೊಳ್ಳಲಿದ್ದೇವೆ. ಕಾನೂನು ಸುವ್ಯವಸ್ಥೆ ನಿಯಂತ್ರಣಕ್ಕೆ ಬರುವವರೆಗೂ ಇದು ಮುಂದುವರಿಯಲಿದೆ’ ಎಂದು ಅವರು ತಿಳಿಸಿದ್ದಾರೆ.
.ಅನುಮತಿ ಪಡೆಯದೆ ಕಡಬ ಪೊಲೀಸ್ ಠಾಣೆ ಬಳಿ ಪ್ರತಿಭಟನೆ: 15 ಜನರ ವಿರುದ್ಧ ಎಫ್ಐಆರ್.ಸುಹಾಸ್ ಶ್ರದ್ದಾಂಜಲಿಯಲ್ಲಿ ದ್ವೇಷ ಭಾಷಣ: ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ FIR.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.