ಉಳ್ಳಾಲ: ತೊಕ್ಕೊಟ್ಟು, ಗಾಂಧಿನಗರದ ಚಾಮುಂಡೇಶ್ವರಿ ಅಮ್ಮನವರು ಮತ್ತು ಪರಿವಾರ ಸಾನ್ನಿಧ್ಯಗಳ ಪುನರ್ ಪ್ರತಿಷ್ಠಾಪನಾ ಕಲಶೋತ್ಸವವು ಏ.29ರಿಂದ ಮೇ 3ರವರೆಗೆ ನಡೆಯಲಿದೆ ಎಂದು ಕ್ಷೇತ್ರದ ಆಡಳಿತ ಮೊಕ್ತೇಸರ ಗಿರೀಶ್ ಕುಮಾರ್ ಯು.ಕೆ. ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭಕ್ತರ ಸಹಕಾರದಿಂದ ಇದೀಗ ಕ್ಷೇತ್ರವು ಜೀರ್ಣೋದ್ಧಾರಗೊಂಡು ಪುನರ್ ಪ್ರತಿಷ್ಠಾ ಕಲಶೋತ್ಸವದ ಸಂಭ್ರಮದಲ್ಲಿದೆ ಎಂದರು.

ಏ.29ರಂದು ಸಂಜೆ 4.30ಕ್ಕೆ ತೊಕ್ಕೊಟ್ಟು ಓವರ್ ಬ್ರಿಡ್ಜ್ ಕೊರಗಜ್ಜ ಸಾನ್ನಿಧ್ಯದಿಂದ ಜೈವೀರ ಮಾರುತಿ ವ್ಯಾಯಾಮ ಶಾಲೆ ಮಾರ್ಗವಾಗಿ ಕ್ಷೇತ್ರಕ್ಕೆ ಹೊರೆಕಾಣಿಕೆ ಮರವಣಿಗೆ ನಡೆಯಲಿದೆ. ಉಳಿಯ ಉಳ್ಳಾಲ್ತಿ ಧರ್ಮ ಅರಸರ ಕ್ಷೇತ್ರದ ಧರ್ಮದರ್ಶಿ ದೇವು ಮೂಲ್ಯಣ್ಣ ಹಾಗೂ ಕಾಪಿಕಾಡ್ ಉಮಾಮಹೇಶ್ವರಿ ಕ್ಷೇತ್ರದ ಆಡಳಿತ ಮೊಕ್ತೇಸರ ಎ.ಜೆ.ಶೇಖರ್ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ. ಸಂಜೆ 7.30ಕ್ಕೆ ಹಾಗೂ ಏ.30ರಂದು ಸಂಜೆ 7ಕ್ಕೆ ಧಾರ್ಮಿಕ ಸಭೆ ನಡೆಯಲಿದೆ. ಮೇ 1ರಂದು ಸಂಜೆ 7.30ಕ್ಕೆ ವಿಧಾನಸಭೆಯ ಅಧ್ಯಕ್ಷ ಯು.ಟಿ.ಖಾದರ್ ಉಪಸ್ಥಿತಿಯಲ್ಲಿ ನಡೆಯುವ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ದೇರಳಕಟ್ಟೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಆಡಳಿತ ಮೊಕ್ತೇಸರ ಚಂದ್ರಹಾಸ ಅಡ್ಯಂತಾಯ ಕಾರ್ಯಕ್ರಮ ಉದ್ಘಾಟಿಸಲಿದ್ದು, ಶಿವಕೃಪಾ ಕುಂಜತ್ತೂರು ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ. ಧಾರ್ಮಿಕ, ರಾಜಕೀಯ, ಸಾಮಾಜಿಕ ಮುಖಂಡರು ಭಾಗವಹಿಸಲಿದ್ದಾರೆ ಎಂದರು.

ಮೇ 1ರಂದು ಬೆಳಿಗ್ಗೆ 7.12ಕ್ಕೆ ತರವಾಡು ಚಾವಡಿಯ ಗೃಹಪ್ರವೇಶ ನಡೆಯಲಿದೆ. ಬೆಳಿಗ್ಗೆ 10.49ಕ್ಕೆ ಚಾಮುಂಡೇಶ್ವರಿ, ಕತ್ತಲೆಕಾನ ಗುಳಿಗ, ಕೊರಗತನಿಯ ಗುಡಿಗಳ ಶಿಖರ ಪ್ರತಿಷ್ಠಾಪನೆ, ಕಲಶಾಭಿಷೇಕ, ಪ್ರಸನ್ನ ಪೂಜೆ ನಡೆಯಲಿದೆ ಎಂದು ಗಿರೀಶ್ ಕುಮಾರ್ ಹೇಳಿದರು.

ಪುನರ್ ಪ್ರತಿಷ್ಠಾಪನಾ ಕಲಶೋತ್ಸವ ಸಮಿತಿಯ ಪದಾಧಿಕಾರಿಗಳಾದ ಚಂದ್ರಶೇಖರ ಉಚ್ಚಿಲ್, ದಿನೇಶ್ ಕಾಜವ, ರಾಘವ ಉಚ್ಚಿಲ್, ಭಾಸ್ಕರ ತೊಕ್ಕೊಟ್ಟು, ಸುರೇಖಾ ಚಂದ್ರಹಾಸ, ಸತೀಶ್ ದೀಪಂ, ರೋಹಿತ್ ಉಳ್ಳಾಲ್, ಆನಂದ ಶೆಟ್ಟಿ ಭಟ್ನಗರ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260429-29-577775416

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.