ಮಂಗಳೂರು:‘ಕೇಂದ್ರ ಲೋಕಸೇವಾ ಆಯೋಗದ ಪರೀಕ್ಷೆ ಫಲಿತಾಂಶ ಇತ್ತೀಚೆಗೆ ಪ್ರಕಟವಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಒಬ್ಬರೂ ಐಎಎಎಸ್ ಅಥವಾ ಐಪಿಎಸ್ ಅಧಿಕಾರಿಗಳಾಗಿ ಈ ಸಲ ಆಯ್ಕೆಯಾಗಿಲ್ಲ.ಇದು ಆತ್ಮವಿಮರ್ಶೆ ಮಾಡಿಕೊಳ್ಳಬೇಕಾದ ವಿಚಾರ’ ಎಂದು ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಜಯಲಕ್ಷ್ಮೀ ಹೇಳಿದರು.

ಇಲ್ಲಿ ಏರ್ಪಡಿಸಿದ್ದ ಜಿಲ್ಲಾ ಕೌಶಲ ಅಭಿವೃದ್ಧಿ ಯೋಜನೆ ತಯಾರಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಸೋಮವಾರ ಮಾತನಾಡಿದರು.

‘ಎಸ್ಎಸ್ಎಲ್ಸಿ ಮತ್ತು ಪಿ.ಯು ಪರೀಕ್ಷೆಗಳ ಫಲಿತಾಂಶದಲ್ಲಿ ಅಷ್ಟೇನೂ ಉತ್ತಮ ಸಾಧನೆ ತೋರದ ಯಾದಗಿರಿ ಜಿಲ್ಲೆಯಿಂದ ನಾಲ್ವರು ಯುಪಿಎಸ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ಎಸ್ಎಸ್ಎಲ್ಸಿ ಮತ್ತು ಪಿ.ಯು ಪರೀಕ್ಷೆ ಫಲಿತಾಂಶದಲ್ಲಿ ರಾಜ್ಯದಲ್ಲೇ ಮೊದಲ ಸ್ಥಾನ ಪಡೆಯುವ ದಕ್ಷಿಣ ಕನ್ನಡ ಜಿಲ್ಲೆಯವರು ಈ ಸಾಧನೆ ಮಾಡಲು ಏಕೆ ಸಾಧ್ಯವಾಗಿಲ್ಲ ಎಂಬುದಕ್ಕೆ ಕಾರಣ ಹುಡುಕಬೇಕಿದೆ’ ಎಂದರು.

‘ಜಿಲ್ಲೆಯು ಶೈಕ್ಷಣಿಕವಾಗಿ ಉನ್ನತ ಸ್ಥಾನದಲ್ಲಿದ್ದರೂ, ಇಲ್ಲಿನ ಪ್ರತಿಭಾವಂತರು ವೃತ್ತಿ ಬದುಕಿಗೆ ಹೊರ ರಾಜ್ಯ ಮತ್ತು ವಿದೇಶಗಳನ್ನು ಅವಲಂಬಿಸುತ್ತಿದ್ದಾರೆ. ಇದರಿಂದ ಸ್ಥಳೀಯ ಕೌಶಲ ಆಧರಿತ ಉದ್ಯೋಗಗಳಿಗೆ ಅರ್ಹರು ಲಭ್ಯವಾಗುತ್ತಿಲ್ಲ. ಇದು ಕಳವಳಕಾರಿ’ ಎಂದರು.

ಜಿಲ್ಲಾ ಕೌಶಲ ಅಭಿವೃದ್ಧಿ ಯೋಜನೆ ಕುರಿತು ಮಾಹಿತಿ ನೀಡಿದ ನೋಡಲ್ ಅಧಿಕಾರಿ ಹರೀಶ್ ಸಿ.ಪಿ., ‘ಮುಂದಿನ 5 ವರ್ಷಗಳಲ್ಲಿ ಜಿಲ್ಲೆಯ ಕೈಗಾರಿಕೆ ಹಾಗೂ ಉದ್ದಿಮೆಗಳಲ್ಲಿ ಲಭ್ಯವಾಗಲಿರುವ ಉದ್ಯೋಗಗಳು ಹಾಗೂ ಅವುಗಳಿಗೆ ಅಗತ್ಯವಿರುವ ಕೌಶಲಗಳಿಗೆ ತಕ್ಕಂತೆ ಜಿಲ್ಲೆಯ ಶಿಕ್ಷಣ ಸಂಸ್ಥೆಗಳಿಂದ ಮಾನವ ಸಂಪನ್ಮೂಲ ಲಭ್ಯವಾಗಬೇಕು. ಇದಕ್ಕೆ ಪೂರಕವಾಗಿ ವಿದ್ಯಾರ್ಥಿಗಳಿಗೆ ತರಬೇತಿ ನೀಡಲು ಜಿಲ್ಲೆಯ ಉನ್ನತ ಶಿಕ್ಷಣ ಸಂಸ್ಥೆಗಳು, ಪಾಲಿಟೆಕ್ನಿಕ್, ಐಟಿಐ, ಕೆಜಿಟಿಟಿಐ ಒತ್ತು ನೀಡಬೇಕಿದೆ’ ಎಂದರು.

‘ಜಿಲ್ಲೆಯ ಐಟಿಐಗಳಲ್ಲಿ 22 ವಿವಿಧ ವೃತ್ತಿಗಳ ಕುರಿತು, ಪಾಲಿಟೆಕ್ನಿಕ್ಗಳಲ್ಲಿ 10 ವಿಭಾಗಗಳಲ್ಲಿ, ಜಿಟಿಟಿಸಿಯಲ್ಲಿ 2 ವಿಭಾಗಗಳಲ್ಲಿ ತರಬೇತಿ ನೀಡಲಾಗುತ್ತಿದೆ. ಜಿಲ್ಲೆಯಲ್ಲಿ ಕೌಶಲ ಆಧರಿತ ಉದ್ಯೋಗಗಳಿಗೆ ಬೇಡಿಕೆ ಇದ್ದರೂ, ಅರ್ಹರು ಲಭ್ಯವಾಗುತ್ತಿಲ್ಲ ಎಂದು ಕೈಗಾರಿಕಾಗಳಿಂದ ಮಾಹಿತಿ ಬಂದಿದೆ. ಜಿಲ್ಲೆಯಲ್ಲಿ ಪ್ರತಿಭಾವಂತರು ಉದ್ಯೋಗಕ್ಕಾಗಿ ವಲಸೆ ಹೋಗುತ್ತಿದ್ದಾರೆ. ಈ ಬಗ್ಗೆ ಅಧ್ಯಯನ ಮಾಡಲಾಗುವುದು’ ಎಂದರು.

ಕೆನರಾ ಸಣ್ಣ ಕೈಗಾರಿಕಾ ಸಂಘದ ಅಧ್ಯಕ್ಷ ಎಂ.ಡಿ. ಪೂಜಾರಿ, ‘ಐಟಿಐ, ಡಿಪ್ಲೊಮಾ ಮತ್ತಿತರ ತಾಂತ್ರಿಕ ಶಿಕ್ಷಣ ಪಡೆವ ವಿದ್ಯಾರ್ಥಿಗಳಿಗೆ ಸಮರ್ಪಕ ತರಬೇತಿ ನೀಡಿದರೆ ಉದ್ಯೋಗ ಮಾರುಕಟ್ಟೆಯ ಅಗತ್ಯ ಪೂರೈಸಲು ಅವರು ಸಮರ್ಥರಾಗಲಿದ್ದಾರೆ. ಐಟಿಐ, ಡಿಪ್ಲೊಮಾ ಸೇರಿದಂತೆ ತಾಂತ್ರಿಕ ಶಿಕ್ಷಣ ಪಡೆದವರು ಆಹಾರ ಡೆಲಿವರಿ ಉದ್ಯೋಗವೂ ಸೇರಿದಂತೆ ಬೇರೆ ಕ್ಷೇತ್ರಗಳತ್ತ ವಿಮುಖರಾಗುತ್ತಿರುವುದು ಕಳವಳಕಾರಿ. ಇದನ್ನು ತಪ್ಪಿಸಿ, ಅವರು ಕಲಿತ ವಿಷಯಕ್ಕೆ ಸಂಬಂಧಿಸಿದ ಕ್ಷೇತ್ರದಲ್ಲೇ ಉದ್ಯೋಗ ದೊರಕಿಸಲು ಒತ್ತು ನೀಡಬೇಕು’ ಎಂದು ಸಲಹೆ ನೀಡಿದರು.

ನಗರಾಭಿವೃದ್ಧಿ ಯೋಜನಾ ನಿರ್ದೇಶಕ ಸಂತೋಷ್ ಕುಮಾರ್, ಕೈಗಾರಿಕಾ ಜಂಟಿ ನಿರ್ದೇಶಕ ಗೋಕುಲ್ದಾಸ್ ನಾಯಕ್, ಎನ್ಐಟಿಕೆ ಉಪನ್ಯಾಸಕ ಪ್ರೊ .ಉದಯ ಭಟ್ ಭಾಗವಹಿಸಿದ್ದರು. ಜಿಲ್ಲಾ ಕೌಶಲ ಅಭಿವೃದ್ಧಿ ಅಧಿಕಾರಿ ಪ್ರದೀಪ್ ಡಿಸೋಜ ಸ್ವಾಗತಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.