ಉಜಿರೆ: ಚಿಕ್ಕೋಡಿಯ ಕಾಮಕುಮಾರ ನಂದಿ ಮುನಿಮಹಾರಾಜರ ಹತ್ಯೆ ಬಗ್ಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅವರು ಖೇದ ವ್ಯಕ್ತಪಡಿಸಿದ್ದಾರೆ.
ರಾಜ್ಯದಲ್ಲಿ ದಿಗಂಬರ ಮುನಿಗಳ ಹತ್ಯೆಯಾಗಿರುವುದು ಇದೇ ಮೊದಲು. ಆರೋಪಿಗಳನ್ನು ಬಂಧಿಸಿದ ಪೊಲೀಸರನ್ನು ಹೆಗ್ಗಡೆಯವರು ಅಭಿನಂದಿಸಿದ್ದಾರೆ.
ಕಾರ್ಕಳ, ಮೂಡುಬಿದಿರೆ, ನರಸಿಂಹರಾಜಪುರ ಮತ್ತು ಹೊಂಬುಜ ಜೈನಮಠದ ಭಟ್ಟಾರಕರೂ ಕೃತ್ಯದ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದಾರೆ.
ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಹತ್ಯೆಯನ್ನು ಖಂಡಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.