ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್ 3ನೇ ಅಲೆ: ಮಕ್ಕಳ ಸುರಕ್ಷತೆಗೆ ಕ್ರಮ

ಸಿದ್ಧತಾ ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಡಾ. ಕುಮಾರ್ ಸೂಚನೆ
Last Updated 5 ಜೂನ್ 2021, 15:26 IST
ಅಕ್ಷರ ಗಾತ್ರ

ಮಂಗಳೂರು: ಕೋವಿಡ್ 3ನೇ ಅಲೆಯು ಮಕ್ಕಳಿಗೆ ಬಾಧಿಸದಂತೆ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಕೋವಿಡ್ 3ನೇ ಅಲೆಯಿಂದ ಮಕ್ಕಳನ್ನು ರಕ್ಷಿಸುವ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮುಂಜಾಗ್ರತಾ ಕ್ರಮಗಳ ಬಗ್ಗೆ ಪೋಷಕರು, ಮಕ್ಕಳಲ್ಲಿ ಜಾಗೃತಿ ಮೂಡಿಸಬೇಕು. ಪಾಲನಾ ಕೇಂದ್ರಗಳಲ್ಲಿರುವ ಮಕ್ಕಳ ಹೆಸರು, ವಿವರ, ಕೋವಿಡ್‍ನಿಂದ ತಂದೆತಾಯಿ ಕಳೆದುಕೊಂಡವರು ಹಾಗೂ ಏಕಪೋಷಕರ ಮಗುವಿನ ಸಮಗ್ರ ಮಾಹಿತಿಯನ್ನು ಕ್ರೋಡೀಕರಿಸಬೇಕು. ಮಕ್ಕಳ ಶಿಕ್ಷಣ, ಮನಸ್ಥಿತಿ ಅರಿತು ಸಹಕಾರ ನೀಡಬೇಕು ಎಂದರು.

ಕೊರೊನಾ ಸೋಂಕು ತಡೆಯುವ ಜಾಗೃತಿಕಾರ್ಯಗಳನ್ನು ಪರಿಣಾಮಕಾರಿಯಾಗಿ ಕೈಗೊಳ್ಳಬೇಕು.ಕರಪತ್ರವನ್ನು ಪ್ರತಿ ಮನೆಗೆ ತಲುಪಿಸಬೇಕು. ಮಕ್ಕಳಿಗೂ ಕೋವಿಡ್‌ ಪ್ರತಿರೋಧ ಚುಚ್ಚುಮದ್ದನ್ನು ನೀಡುವ ಸಾಧ್ಯತೆ ಇದ್ದು, ಯೋಜನೆ ರೂಪಿಸಬೇಕು. ಸೋಂಕು ಸಂಭವಿಸಿದರೆ ಮಕ್ಕಳ ಪ್ರಕರಣದ ವರದಿಯನ್ನು ಪ್ರತಿದಿನ ನೀಡಬೇಕು. ಆಶಾ ಕಾರ್ಯಕರ್ತೆಯರು, ಆರೋಗ್ಯ ಕಾರ್ಯಕರ್ತರು ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ಸೋಂಕು ಪೀಡಿತ ಮಕ್ಕಳ ಮನೆಗೆ ಭೇಟಿ ನೀಡಿ ಅವರ ಆರೋಗ್ಯ ಕ್ಷೇಮವನ್ನು ವಿಚಾರಿಸಬೇಕು ಎಂದರು. ತಾಲ್ಲೂಕು ಪಟ್ಟದಲ್ಲಿ ಸಭೆ ನಡೆಸಬೇಕು ಎಂದು ಸೂಚನೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಆನಂದ್‍ಕುಮಾರ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಮಲ್ಲೇ ಸ್ವಾಮಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿದೇರ್ಶಕ ಪಾಪಬೋವಿ, ಅಧಿಕಾರಿಗಳು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT