ಗುರುವಾರ, 16 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೂಡುಬಿದಿರೆ | ‘ಕೃತಕ ಬುದ್ಧಿಮತ್ತೆ ಜತೆ ಸಾಗುವುದು ಅನಿವಾರ್ಯ’

Published 29 ಏಪ್ರಿಲ್ 2024, 14:19 IST
Last Updated 29 ಏಪ್ರಿಲ್ 2024, 14:19 IST
ಅಕ್ಷರ ಗಾತ್ರ

ಮೂಡುಬಿದಿರೆ: ‘ಕೃತಕ ಬುದ್ಧಿಮತ್ತೆ (ಎ.ಐ.) ತಂತ್ರಜ್ಞಾನದೊಂದಿಗೆ ಸಾಗುವುದು ಅನಿವಾರ್ಯ’ ಎಂದು ಮಿಜಾರಿನ ಆಳ್ವಾಸ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜಿನ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಎಂಜಿನಿಯರಿಂಗ್ ವಿಭಾಗದ ಹಿರಿಯ ಸಹಾಯಕ ಪ್ರಾಧ್ಯಾಪಕ ಗಣೇಶ್ ಕೆ. ಹೇಳಿದರು.

ಇಲ್ಲಿನ ಮಿಜಾರು ಆಳ್ವಾಸ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜಿನ ಕಂಪ್ಯೂಟರ್ ಪ್ರಯೋಗಾಲಯದಲ್ಲಿ ಸೋಮವಾರ ಆಳ್ವಾಸ್ ಕಾಲೇಜಿನ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಅಭಿವ್ಯಕ್ತಿ ವೇದಿಕೆ ಹಮ್ಮಿಕೊಂಡಿದ್ದ ‘ನೆಕ್ಸ್ಟ್-ಜೆನ್ ಜರ್ನಲಿಸಂ’ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

ಹೊಸದಾಗಿ ಬಂದ ಕೃತಕಬುದ್ಧಿಮತ್ತೆಯು ಪತ್ರಿಕಾರಂಗಕ್ಕೆ ಸವಾಲು. ಐದು ವರ್ಷಗಳ ಹಿಂದೆ ಸ್ವಬುದ್ಧಿಯಿಂದ ವಿಷಯ ರಚನೆ ಮಾಡುತ್ತಿದ್ದ ವರದಿಗಾರ, ಸಂಪಾದಕ, ನಿರೂಪಕನ ಕಾರ್ಯವನ್ನು ಇಂದು ಎ.ಐ. ನಿರ್ವಹಿಸುತ್ತಿದೆ ಎಂದರು.

ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಸಹ ಪ್ರಾಧ್ಯಾಪಕ ಶ್ರೀನಿವಾಸ ಹೊಡೆಯಾಲ, ಸಹಾಯಕ ಪ್ರಾಧ್ಯಾಪಕ ನಿಶಾನ್ ಕೋಟ್ಯಾನ್, ಅಭಿವ್ಯಕ್ತಿ ವೇದಿಕೆಯ ವಿದ್ಯಾರ್ಥಿ ಸಂಯೋಜಕ ವೈಶಾಕ್ ಮಿಜಾರ್ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT