ಮುಡಿಪು: ಕನ್ನಡ ನಾಡು-ನುಡಿಯ ಸಂರಕ್ಷಣೆಯ ಜತೆಗೆ ಅದನ್ನು ಉಳಿಸಿ, ಬೆಳೆಸುವಲ್ಲಿ ಯುವಕರ ಪಾತ್ರ ಮಹತ್ತರವಾದುದು ಎಂದು ಮಂಗಳೂರು ವಿಶ್ವವಿದ್ಯಾಲಯದ ಎಸ್‌ವಿಪಿ ಕನ್ನಡ ಅಧ್ಯಯನ ಸಂಸ್ಥೆಯ ಮುಖ್ಯಸ್ಥ ಪ್ರೊ.ಸೋಮಣ್ಣ ಹೊಂಗಳ್ಳಿ ಹೇಳಿದರು
ಮಂಗಳ ಗಂಗೋತ್ರಿಯ ವಿಶ್ವವಿದ್ಯಾಲಯ ಪ್ರಥಮದರ್ಜೆ ಕಾಲೇಜಿನಲ್ಲಿ ಕಾರ್ಯಾಗಾರ ಸಮಿತಿ ಹಾಗೂ ಕನ್ನಡ ಸಂಘದ ಸಹಯೋಗದಲ್ಲಿ ಕರ್ನಾಟ ರಾಜ್ಯೋತ್ಸವದ ಅಂಗವಾಗಿ ನಡೆದ ಭಾಷಾ ಸಂಭ್ರಮ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಕನ್ನಡ ಭಾಷೆ ಬೆಳೆದು ಬಂದ ಹಾದಿ, ಕರ್ನಾಟಕ ಏಕೀಕರಣ ಚಳವಳಿ ಸೇರಿದಂತೆ ಕರ್ನಾಟಕದ ಚರಿತ್ರೆ ಅರಿತು ಮುನ್ನಡೆಯಬೇಕು ಎಂದು ಹೇಳಿದರು.
ಮಂಗಳೂರು ವಿಶ್ವವಿದ್ಯಾಲಯ ಕಾಲೇಜಿನ ಕನ್ನಡ ವಿಭಾಗದ ಅಧ್ಯಕ್ಷ ಮಾಧವ ಎಂ.ಕೆ. ಮಾತನಾಡಿದರು.
ಕಾಲೇಜಿನ ಪ್ರಾಂಶುಪಾಲರಾದ ಕೆ.ಪ್ರಿಯಾ ಅಧ್ಯಕ್ಷತೆ ವಹಿಸಿದ್ದರು.
ಯಶಸ್ ಮತ್ತು ಚೇತನಾ ಬಳಗದವರು ನಾಡು–ನುಡಿ ಕುರಿತ ಹಾಡು ಹಾಡಿದರು.
ಕನ್ನಡ ಸಂಘದ ಸಂಯೋಜಕರಾದ ಸಹನಾ ಬಿ., ಕಾಜಲ್, ಕಾರ್ಯಕಾರಿ ಸಮಿತಿ ಸಂಯೋಜಕ ಸಾಯಿ ದಿವ್ಯದರ್ಶನ್ ಇದ್ದರು.
ವಿದ್ಯಾರ್ಥಿನಿ ಚೈತ್ರಾ ಸ್ವಾಗತಿಸಿ, ಚೇತನಾ ವಂದಿಸಿದರು. ಪೂರ್ವ ಕಾರ್ಯಕ್ರಮ ನಿರೂಪಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.