ಪುತ್ತೂರು: ‘ಯುವತಿಗೆ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಹಿಂದೂ ಮುಖಂಡರ ಸಹಿತ ಯಾರೂ ಯಾಕೆ ಮಾತನಾಡುತ್ತಿಲ್ಲ. ಈ ಪ್ರಕರಣವನ್ನು ಸಮಾಜ ಯಾಕೆ ಗಂಭೀರವಾಗಿ ತೆಗೆದುಕೊಂಡಿಲ್ಲ’ ಎಂದು ಪುತ್ತೂರು ನಗರ ಕಾಂಗ್ರೆಸ್ ಘಟಕದ ಅಧ್ಯಕ್ಷ ಎಚ್.ಮಹಮ್ಮದ್ ಅಲಿ ಆರೋಪಿಸಿದ್ದಾರೆ.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕ್ಷುಲ್ಲಕ ವಿಚಾರಗಳಿಗೆ ಸಂಬಂಧಿಸಿ ಹಿಂದುತ್ವದ ಬಗ್ಗೆ ಮಾತನಾಡುವ ಮುಖಂಡರು ಈಗ ಎಲ್ಲಿ ಅಡಗಿ ಕುಳಿತಿದ್ದಾರೆ. ಪುತ್ತೂರಿನಲ್ಲಿ ಯಾವುದೇ ಪ್ರಕರಣ ನಡೆದರೂ ಮುಂಚೂಣಿಯಲ್ಲಿರುತ್ತಿದ್ದವರು ಎಲ್ಲಿ ಹೋಗಿದ್ದಾರೆ ಎಂದು ಅವರು ಪ್ರಶ್ನಿಸಿದದರು.

ಯುವತಿಗೆ ಅನ್ಯಾಯವೆಸಗಿದ ಈ ಪ್ರಕರಣದಲ್ಲಿ ಯಾರೆಲ್ಲಾ ಮಧ್ಯಸ್ತಿಗೆ ವಹಿಸಲು ಹೋಗಿದ್ದಾರೋ ಅವರೆಲ್ಲರ ಹೆಸರು ಬಹಿರಂಗವಾಗಬೇಕು. ಆರೋಪಿಯ ತಂದೆಯನ್ನೂ ಬಂಧಿಸಬೇಕು. ಪೋಲಿಸರು ಆರೋಪಿಯ ಮನೆಯಲ್ಲೂ ತನಿಖೆ ನಡೆಸಬೇಕು ಎಂದು ಅವರು ಆಗ್ರಹಿಸಿದರು.

ಕಾಂಗ್ರೆಸ್ ಮುಖಂಡರಾದ ಮೌರಿಸ್ ಮಸ್ಕರೇನಸ್, ಸುರೇಶ್ಪೂಜಾರಿ, ಹರೀಶ್ಆಚಾರ್ಯ, ರಶೀದ್ ಮರ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.