ಶುಕ್ರವಾರ, 19 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಉಪ್ಪಿನಂಗಡಿ | ಮಹಿಳೆ ಸಾವು: ಬಾಲಕ ವಶಕ್ಕೆ

Published 19 ಜೂನ್ 2024, 6:35 IST
Last Updated 19 ಜೂನ್ 2024, 6:35 IST
ಅಕ್ಷರ ಗಾತ್ರ

ಉಪ್ಪಿನಂಗಡಿ: ಉಪ್ಪಿನಂಗಡಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಹೇಮಾವತಿ (37) ಎಂಬುವರು ಭಾನುವಾರ ತಡರಾತ್ರಿ ಮೃತಪಟ್ಟಿದ್ದಾರೆ. ಕೊಲೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀ ಸರು, ಈ ಕೃತ್ಯಕ್ಕೆ ಸಂಬಂಧಿಸಿದಂತೆ ಕಾನೂನು ಸಂಘರ್ಷಕ್ಕೆ ಸಿಲುಕಿದ ಬಾಲಕನನ್ನು ವಶಕ್ಕೆ ಪಡೆದಿದ್ದಾರೆ. 

10ನೇ ತರಗತಿ ವಿದ್ಯಾರ್ಥಿಯಾಗಿರುವ ಬಾಲಕ  ಹೇಮಾವತಿ ಅವರ ಮನೆಯಲ್ಲೇ ತಂಗಿದ್ದ. ರಾತ್ರಿ ಹೇಮಾವತಿ ಮಲಗಿದ್ದಲ್ಲಿಗೆ ಹೋಗಿ ಅವರ ಮೈ ಮುಟ್ಟಿದ್ದು, ಅದಕ್ಕೆ ಆಕೆ ಪ್ರತಿರೋಧ ವ್ಯಕ್ತಪಡಿಸಿದ್ದರು. ಆಗ ಭಯಗೊಂಡ ಬಾಲಕ ಅವರ ಕತ್ತು ಹಿಸುಕಿರುವುದಾಗಿ ತನಿಖೆ ವೇಳೆ ಬಾಯಿಬಿಟ್ಟಿದ್ದಾನೆ ಎಂದು ಮೂಲಗಳು ತಿಳಿಸಿವೆ. 

ಘಟನೆಗೆ ಸಂಬಂಧಿಸಿದಂತೆ ಹೇಮಾವತಿ ಅವರ ಪತಿ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ.

ಕಾನೂನು ಸಂಘರ್ಷಕ್ಕೆ ಸಿಲುಕಿರುವ ಬಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ತನಿಖಾಧಿಕಾರಿ ಉಪ್ಪಿನಂಗಡಿ ಗ್ರಾಮಾಂತರ ಪೊಲೀಸ್ ಇನ್‌ಸ್ಪೆಕ್ಟರ್‌ ರವಿ ಬಿ.ಎಸ್. ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT