ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಗಳೂರಿಗೆ ಬಂದ ದಲಾಯಿಲಾಮ

Last Updated 29 ಆಗಸ್ಟ್ 2019, 7:49 IST
ಅಕ್ಷರ ಗಾತ್ರ

ಮಂಗಳೂರು: ಟಿಬೆಟಿಯನ್ ಆಧ್ಯಾತ್ಮಿಕ ನಾಯಕ ದಲಾಯಿಲಾಮ ಅವರು ಗುರುವಾರ ಮಂಗಳೂರಿಗೆ ಬಂದರು.

ಮಧ್ಯಾಹ್ನ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದ ಅವರನ್ನು ಮಂಗಳೂರು ಉಪವಿಭಾಗಾಧಿಕಾರಿ ರವಿಚಂದ್ರ ನಾಯ್ಕ್, ಉಪ ಪೊಲೀಸ್ ಆಯುಕ್ತರಾದ ಅರುಣಾಂಶು ಗಿರಿ, ಲಕ್ಷ್ಮೀ ಗಣೇಶ್ ಅವರು, ಜಿಲ್ಲಾಡಳಿತದ ಪರವಾಗಿ ಸ್ವಾಗತಿಸಿದರು.

ವಿಮಾನ ನಿಲ್ದಾಣದ ಹೊರಗಡೆ ಟಿಬೆಟಿಯನ್ ಸಾಂಪ್ರದಾಯಿಕ ನೃತ್ಯದ ಮೂಲಕ ಅವರನ್ನು ಸ್ವಾಗತಿಸಲಾಯಿತು‌. ದಲಾಯಿಲಾಮ ಬರುವಿಕೆಯ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿತ್ತು. ನಗರದ ಖಾಸಗಿ ಹೋಟೆಲ್ನಲ್ಲಿ ತಂಗಿರುವ ಅವರನ್ನು ಭಾರೀ ಭದ್ರತೆಯಲ್ಲಿ ಝೀರೋ ಟ್ರಾಫಿಕ್ ನಲ್ಲಿ ವಿಮಾನ ನಿಲ್ದಾಣದಿಂದ ನಗರಕ್ಕೆ ಕರೆ ತರಲಾಯಿತು‌.

ಮೂರು ದಿನಗಳ ಕಾಲ ಮಂಗಳೂರು ನಗರದಲ್ಲಿ ತಂಗಲಿರುವ ದಲಾಯಿಲಾಮ ಅವರು ಇದೇ 30 ರಂದು ನಗರದ ಫಾದರ್ ಮುಲ್ಲರ್ ಸಭಾಂಗಣದಲ್ಲಿ ನಡೆಯುವ ನಯನ ಅಖಿಲ ಭಾರತ ಕ್ಯಾಥೊಲಿಕ್ ಶಾಲಾ ಒಕ್ಕೂಟದ ರಾಷ್ಟ್ರೀಯ ಸಮಾವೇಶದಲ್ಲಿ ಭಾಗವಹಿಸುವರು. 31 ರಂದು ಅವರು ಬೆಂಗಳೂರಿಗೆ ತೆರಳಲಿದ್ದಾರೆ,

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT