ಮಂಗಳವಾರ, 16 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ವಿದ್ಯುತ್ ಅವಘಡ: ವರದಿ ಸಲ್ಲಿಕೆಗೆ ಡಿಸಿ ಸೂಚನೆ

Published 29 ಜೂನ್ 2024, 16:18 IST
Last Updated 29 ಜೂನ್ 2024, 16:18 IST
ಅಕ್ಷರ ಗಾತ್ರ

ಮಂಗಳೂರು: ಜಿಲ್ಲೆಯಲ್ಲಿ ವಿದ್ಯುತ್ ಅವಘಡದಿಂದ ಸಂಭವಿಸಿರುವ ಮೂರು ಪ್ರಾಣಹಾನಿಯ ಬಗ್ಗೆ ಪರಿಶೀಲಿಸಿ, ವರದಿ ನೀಡಲು ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೂಚನೆ ನೀಡಿದ್ದಾರೆ.

ಈ ಸಂಬಂಧ ಮೆಸ್ಕಾಂ ಹಿರಿಯ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ಸಭೆ ನಡೆಸಿದರು. 1,600 ಮೀಟರ್ ಬಾಕ್ಸ್‌ಗಳಲ್ಲಿ ಎರಡು ದಿನಗಳ ಒಳಗಾಗಿ ಟ್ರಿಪರ್‌ಗಳನ್ನು ಅಳವಡಿಸಬೇಕು. ಮರದ ರೆಂಬೆ–ಕೊಂಬೆಗಳಿಗೆ ತಾಗಿ ಹಾದು ಹೋಗಿರುವ ವಿದ್ಯುತ್‌ ತಂತಿ, ಕಂಬಗಳು ಇರುವ ಸ್ಥಳಗಳನ್ನು ಎರಡು ದಿನಗಳಲ್ಲಿ ಗುರುತಿಸಿ, ಅರಣ್ಯ ಇಲಾಖೆ ಸಹಯೋಗದಲ್ಲಿ ಅವುಗಳನ್ನು ತೆರವುಗೊಳಿಸಿ, ಅನುಪಾಲನಾ ವರದಿ ಸಲ್ಲಿಸಬೇಕು ಎಂದರು.

ಬೀದಿದೀಪಗಳ ಕಂಬಗಳಲ್ಲಿ ವಿದ್ಯುತ್ ಸೋರಿಕೆಯಾಗುತ್ತಿದೆಯೇ ಎಂಬುದನ್ನು ಮೆಸ್ಕಾಂ ಮತ್ತು ಮಹಾನಗರ ಪಾಲಿಕೆ ಜಂಟಿ ಸಮೀಕ್ಷೆ ನಡೆಸಿ ಅನುಪಾಲನಾ ವರದಿ ಸಲ್ಲಿಸಬೇಕು. ವಿದ್ಯುತ್ ಅವಘಡ ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

ಸೂಚನೆ: ಎಲ್ಲ ಇನ್ಸಿಡೆಂಟ್ ಕಮಾಂಡರ್‌ಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ತಮ್ಮ ಮೊಬೈಲ್ ಫೋನ್ ಸಂಖ್ಯೆಯನ್ನು 24X7 ಅವಧಿಯಲ್ಲಿ ಚಾಲ್ತಿಯಲ್ಲಿ ಇರುವಂತೆ ನೋಡಿಕೊಳ್ಳಬೇಕು. ವಿಪತ್ತಿನ ಸಮಯದಲ್ಲಿ ಸಾರ್ವಜನಿಕರ ಕರೆ ಸ್ವೀಕರಿಸಿ, ತಕ್ಷಣ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಲ್ಲ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಹೆದ್ದಾರಿ ಬದಿಯಲ್ಲಿ ಮಳೆ ನೀರು ಹರಿದು ಹೋಗಲು ಚರಂಡಿ ವ್ಯವಸ್ಥೆಗೊಳಿಸಿ, ಅನುಪಾಲನಾ ವರದಿ ನೀಡುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT