ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜನರಿಗೆ ತೊಂದರೆ ಆಗದಂತೆ ಪರ್ಯಾಯ ವ್ಯವಸ್ಥೆ

ಖಾಸಗಿ ಬಸ್ ಮಾಲೀಕರು, ಅಧಿಕಾರಿಗಳ ಜೊತೆಗೆ ಡಿಸಿ ಸಭೆ
Last Updated 7 ಏಪ್ರಿಲ್ 2021, 15:08 IST
ಅಕ್ಷರ ಗಾತ್ರ

ಮಂಗಳೂರು: ರಸ್ತೆ ಸಾರಿಗೆ ಸಂಸ್ಥೆಯ ನೌಕರರು ಅನಿರ್ದಿಷ್ಟ ಅವಧಿಯ ಮುಷ್ಕರದ ಹಿನ್ನೆಲೆ ಜಿಲ್ಲೆಯ ಸಾರ್ವಜನಿಕರಿಗೆ ಸಾರಿಗೆ ವ್ಯವಸ್ಥೆಯಲ್ಲಿ ಯಾವುದೇ ತೊಂದರೆ ಆಗದಂತೆ ಪರ್ಯಾಯ ವ್ಯವಸ್ಥೆಯನ್ನು ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ. ಕೆ.ವಿ. ಸೂಚನೆ ನೀಡಿದರು.

ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜನರ ಸಂಚಾರಕ್ಕೆ ಅನಾನೂಕೂಲ ಆಗದಂತೆ ಸೂಕ್ತ ವಾಹನಗಳ ವ್ಯವಸ್ಥೆಗಳನ್ನು ಮಾಡಬೇಕು ಎಂದು ಪೊಲೀಸ್, ಸಾರಿಗೆ ಅಧಿಕಾರಿಗಳು, ಕೆಎಸ್ಆರ್‌ಟಿಸಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಯಾವುದೇ ಪ್ರಯಾಣಿಕ ಮ್ಯಾಕ್ಸಿ ಕ್ಯಾಬ್, ಖಾಸಗಿ ಬಸ್ ವಿಮಾ ನೋಂದಣಿ ಹೊಂದಿ, ಸಂಚಾರಕ್ಕೆ ಯೋಗ್ಯವಾಗಿದ್ದು, ಚಾಲಕನು ನಿಗದಿತ ವಾಹನ ಚಾಲನಾ ಪತ್ರವನ್ನು ಹೊಂದಿದ್ದರೆ, ತಾತ್ಕಾಲಿಕ ರಹದಾರಿ ಪಡೆದು ಅಥವಾ ಪಡೆಯದೇ ಸಾರ್ವಜನಿಕರ ಅಗತ್ಯಕ್ಕೆ ತಕ್ಕಂತೆ ಚಾಲನೆ ಮಾಡಬಹುದು ಎಂದರು.

ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳಿಗೆ ಸಂಚರಿಸುವ ವಿದ್ಯಾರ್ಥಿಗಳ ಮಾಹಿತಿಯನ್ನು ಕ್ರೋಡೀಕರಿಸಿ ನೀಡುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಿಗೆ ಸೂಚನೆ ನೀಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೃಷಿಕೇಶ್, ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಪ್ರಾದೇಶಿಕ ಸಾರಿಗೆ ಅಧಿಕಾರಿ ವರ್ಣೇಕರ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೆಶಕ ಮಲ್ಲೇಸ್ವಾಮಿ, ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಅರುಣ್, ಖಾಸಗಿ ಬಸ್ ಮಾಲೀಕರ ಸಂಘ, ಮ್ಯಾಕ್ಸಿ ಕ್ಯಾಬ್ ಮಾಲೀಕರ ಸಂಘದ ಪದಾಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT