ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಂಡೋ ಸಂತ್ರಸ್ತರ ಸಮಸ್ಯೆ ಪರಿಹರಿಸಲು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೂಚನೆ

Published 25 ನವೆಂಬರ್ 2023, 5:35 IST
Last Updated 25 ನವೆಂಬರ್ 2023, 5:35 IST
ಅಕ್ಷರ ಗಾತ್ರ

ಮಂಗಳೂರು: ಎಂಡೋಸಲ್ಫಾನ್ ಸಂತ್ರಸ್ತರ ಸಮಸ್ಯೆಗಳನ್ನು ಸ್ಥಳೀಯವಾಗಿಯೇ ಪರಿಹರಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಕಾರ್ಯಕ್ರಮದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಆಯಾ ಆರೋಗ್ಯ ಕೇಂದ್ರ ಮಟ್ಟದಲ್ಲಿ ಎಂಡೋ ಸಂತ್ರಸ್ತರು, ಅವರ ಪೋಷಕರು, ವೈದ್ಯಾಧಿಕಾರಿಗಳು, ಪಿಡಿಒ, ವಿ.ಎ. ಅವರನ್ನೊಳಗೊಂಡ ತಂಡ ರಚಿಸಬೇಕು. ಎಂಡೋಸಲ್ಫಾನ್ ಬಾಧಿತ ಮಕ್ಕಳು ಮಾನಸಿಕ ಅಂಗವೈಕಲ್ಯ, ಬುದ್ಧಿಮಾಂದ್ಯತೆ ಸೇರಿದಂತೆ ಇನ್ನಿತರ ಸಮಸ್ಯೆಗಳಿಂದ ನರಳುತ್ತಾರೆ. ಅವರನ್ನು ಗುರುತಿಸಿ, ಜಿಲ್ಲಾ ಆಸ್ಪತ್ರೆ ಹಾಗೂ ತಾಲ್ಲೂಕು ಆಸ್ಪತ್ರೆ ಅಧಿಕಾರಿಗಳು, ಗ್ರಾಮವಾರು ಪಟ್ಟಿಯನ್ನು ತಯಾರಿಸಿ ಅವರಿಗೆ ಅಗತ್ಯ ಔಷಧಗಳು ಹಾಗೂ ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ತಪ್ಪದೇ ನೀಡಬೇಕು ಎಂದರು.

ಜಿಲ್ಲೆಯಲ್ಲಿ 364 ಎಂಡೋಸಲ್ಫಾನ್ ಪೀಡಿತರು ಸಾವನ್ನಪ್ಪಿದ್ದು, 6,314 ಮಂದಿ ವಿವಿಧ ರೀತಿಯ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ ಎಂದು ಎಂಡೋಸಲ್ಫಾನ್ ಕೋಶದ ನೋಡಲ್ ಅಧಿಕಾರಿ  ಡಾ. ನವೀನ್‍ಚಂದ್ರ ಕುಲಾಲ್ ಹೇಳಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಆನಂದ್ ಕೆ., ಹೆಚ್ಚುವರಿ ಜಿಲ್ಲಾಧಿಕಾರಿ  ಜಿ. ಸಂತೋಷ ಕುಮಾರ್, ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ, ಆರೋಗ್ಯ ಇಲಾಖೆ ಎಂಡೋಸಲ್ಫಾನ್ ವಿಭಾಗದ ಸಮನ್ವಯಾಧಿಕಾರಿ ಸಜೀವುದ್ದೀನ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT