ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿ ಬಾಕಿ ಉಳಿದಿರುವ ಸ್ನಾತಕ ಹಾಗೂ ಸ್ನಾತಕೋತ್ತರ ಪದವಿ ಪರೀಕ್ಷೆಗಳನ್ನು ಆಗಸ್ಟ್ 11ರಿಂದ ಮುಂದುವರಿಸುವಂತೆ ವಿಶ್ವವಿದ್ಯಾಲಯದ ಕುಲಸಚಿವರಿಗೆ, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಈ ಸಂಬಂಧ ಗುರು ವಾರ ಆಯೋಜಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ನೆರೆಯ ಕೇರಳ ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳು ತೀವ್ರಗೊಂಡ ಕಾರಣ ಕಾಸರಗೋಡಿಗೆ ಸರ್ಕಾರಿ ಹಾಗೂ ಖಾಸಗಿ ಬಸ್‌ಗಳ ಸಂಚಾರ ಸ್ಥಗಿತಗೊಳಿಸಲಾಗಿದೆ. ಗಡಿಗಳ ಚೆಕ್ ಪೋಸ್ಟ್‌ಗಳಲ್ಲಿ ತಪಾಸಣೆ ತೀವ್ರಗೊಳಿಸಿದ್ದು, ಅನಗತ್ಯ ಸಂಚಾರವನ್ನು ರದ್ದುಪಡಿಸಲಾಗಿದೆ, ಕೇರಳದ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲು ಕಷ್ಟಸಾಧ್ಯವಾದ ಕಾರಣ, ಆಗಸ್ಟ್ 4ರಂದು ನಡೆಯಬೇಕಿದ್ದ ಪದವಿ ಪರೀಕ್ಷೆಗಳನ್ನು ಆಗಸ್ಟ್ 11ರಂದು ನಡೆಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.

ಪದವಿ ಪರೀಕ್ಷೆಗಳಲ್ಲಿ ವಹಿಸಲಾದ ಅಸೈನ್‍ಮೆಂಟ್‍ಗಳನ್ನು ಆನ್‍ಲೈನ್ ಅಥವಾ ಅಂಚೆ ಮೂಲಕ ಸಂಬಂಧಿಸಿದ ಕಾಲೇಜುಗಳೀಗೆ ತಲುಪಿಸಲು ಅವಕಾಶ ನೀಡಬೇಕು, ಪದವಿ ಪರೀಕ್ಷೆಗಳಿಗೆ ಹಾಜರಾಗಲು ಇಚ್ಛಿಸುವ ಕೋವಿಡ್ ಸೋಂಕಿತ ಹಾಗೂ ಅನಾರೋಗ್ಯದಿಂದ ಬಳಲುತ್ತಿರುವ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಪರೀಕ್ಷಾ ಕೊಠಡಿಗಳ ವ್ಯವಸ್ಥೆ ಮಾಡಿಕೊಳ್ಳುವಂತೆ ಅವರು ತಿಳಿಸಿದರು.

ಜಿಲ್ಲೆಯಲ್ಲಿ 29,052 ಪದವಿ ವಿದ್ಯಾರ್ಥಿಗಳು, 5,493 ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು ಹಾಗೂ ಕೇರಳದ 2ಸಾವಿರ ವಿದ್ಯಾರ್ಥಿಗಳು ಪರೀಕ್ಷೆಗಳಿಗೆ ಹಾಜರಾಗಲಿದ್ದಾರೆ. ಈ ಪರೀಕ್ಷೆ ಎದುರಿಸಲಿರುವ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ಎಚ್ಚರ ವಹಿಸಬೇಕು. ಯಾವುದೇ ರೀತಿಯ ದಂಡವನ್ನು ವಿಧಿಸದಂತೆ ಎಲ್ಲ ಕಾಲೇಜಿನ ಪ್ರಾಂಶುಪಾಲರಿಗೆ ಸೂಚನೆ ನೀಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಪ್ರಜ್ಞಾ ಅಮ್ಮೆಂಬಳ, ಮಂಗಳೂರು ವಿಶ್ವವಿದ್ಯಾಲಯದ ಕುಲಸಚಿವ ಡಾ.ಪಿ.ಎಲ್. ಧರ್ಮ, ಕಾಲೇಜು ಶಿಕ್ಷಣ ಇಲಾಖೆಯ ವಿಶೇಷಾಧಿಕಾರಿ ಡಾ.ಜಯಕರ ಭಂಡಾರಿ ಎಂ., ಕರ್ನಾಟಕ ರಾಜ್ಯ ಸಮಿತಿಯ ರಾಜ್ಯ ಕಾರ್ಯದರ್ಶಿ ಫಾರೂಕ್ ಬಾಯಬೆ, ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕ ದೇವಿಪ್ರಸಾದ್ ಹಾಗೂ ಇತರೆ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.