ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

₹ 3.96 ಲಕ್ಷ ಮರಳಿಸಲು ಸೂಚನೆ

ಖಾಸಗಿ ಆಸ್ಪತ್ರೆಗಳಿಂದ ಹೆಚ್ಚುವರಿ ಹಣ ವಸೂಲಿ ಪ್ರಕರಣ
Last Updated 8 ಆಗಸ್ಟ್ 2021, 3:41 IST
ಅಕ್ಷರ ಗಾತ್ರ

ಮಂಗಳೂರು: ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯಡಿ ಜಿಲ್ಲೆಯ ಏಳು ಖಾಸಗಿ ಆಸ್ಪತ್ರೆಗಳು ರೋಗಿಗಳು ಹಾಗೂ ಅವರ ಸಂಬಂಧಿಕರಿಂದ ಹೆಚ್ಚುವರಿ ಹಣ ಪಡೆದಿರುವ ಬಗ್ಗೆ ಹಾಗೂ ಯೋಜನೆಯಡಿ ಚಿಕಿತ್ಸೆಗೆ ನಿರ್ಲಕ್ಷ್ಯ ವಹಿಸಿದ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ, ಸಂತ್ರಸ್ತರಿಗೆ ಕೂಡಲೇ ಹಣ ಹಿಂದಿರುಗಿಸಲು ಸೂಚನೆ ನೀಡಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಮಟ್ಟದ ಕುಂದುಕೊರತೆ ಪರಿಹಾರ ಸಮಿತಿ ಸಭೆಯಲ್ಲಿ, ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯಡಿ ಸಂತ್ರಸ್ತರು ದಾಖಲಿಸಿದ್ದ ದೂರುಗಳನ್ನು ಆಲಿಸಿದ ಜಿಲ್ಲಾಧಿಕಾರಿ, ವಾರದೊಳಗೆ ರೋಗಿಗಳ ಬ್ಯಾಂಕ್ ಖಾತೆಗೆ ಹಣ ವರ್ಗಾಯಿಸಿ, ಸ್ವೀಕೃತಿ ಪತ್ರವನ್ನು ಜಿಲ್ಲಾಧಿಕಾರಿ ಕಚೇರಿಗೆ ಸಲ್ಲಿಸುವಂತೆ ಆದೇಶಿಸಿದರು.

ಈ ಕುರಿತು ಕುಂದುಕೊರತೆ ಪರಿಹಾರ ಸಮಿತಿ ಸದಸ್ಯ ಕಾರ್ಯದರ್ಶಿಯೂ ಆಗಿರುವ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕಿಶೋರ್‌ಕುಮಾರ್ ಅವರು, ಏಳು ಆಸ್ಪತ್ರೆಗಳಿಗೆ ನೋಟಿಸ್‌ ಜಾರಿಗೊಳಿಸಿದ್ದು, ರೋಗಿಗಳಿಂದ ಹೆಚ್ಚುವರಿಯಾಗಿ ಪಡೆದಿರುವ ಒಟ್ಟು ₹3.69 ಲಕ್ಷ ಕೂಡಲೇ ಹಿಂದಿರುಗಿಸುವಂತೆ ಸೂಚಿಸಿದ್ದಾರೆ.

ಒಂದು ಖಾಸಗಿ ಆಸ್ಪತ್ರೆಯಲ್ಲಿ ಆಯುಷ್ಮಾನ್‌ ಭಾರತ–ಆರೋಗ್ಯ ಕರ್ನಾಟಕ ಯೋಜನೆಯಡಿ ಚಿಕಿತ್ಸೆ ನೀಡಲು ನಿರಾಕರಿಸಿದ್ದು, ಅದಕ್ಕಾಗಿ ₹1.50 ಲಕ್ಷ ಮರುಪಾವತಿಸುವಂತೆ ಜಿಲ್ಲಾಧಿಕಾರಿ ನೇತೃತ್ವದ ಸಮಿತಿ ಆದೇಶಿಸಿದೆ.

ಸೂಚನಾ ಫಲಕ ಅಳವಡಿಸಿ
ಜಿಲ್ಲೆಯ ಎಲ್ಲ ಖಾಸಗಿ ನೋಂದಾಯಿತ ಆಸ್ಪತ್ರೆಗಳಲ್ಲಿ ರೋಗಿಗಳು ಹಣ ಪಾವತಿ ಮಾಡುವಾಗ ಬಿಲ್ ಪಡೆದುಕೊಳ್ಳುವಂತೆ ಆಸ್ಪತ್ರೆಯ ವಿಚಾರಣಾ ಕೌಂಟರ್ ಹಾಗೂ ಬಿಲ್ಲಿಂಗ್ ಕೌಂಟರ್‌ ಹಾಗೂ ವಾರ್ಡ್‌ಗಳಲ್ಲಿ ಸೂಚನಾ ಫಲಕಗಳನ್ನು ಅಳವಡಿಸುವಂತೆ ಆಸ್ಪತ್ರೆಯ ಮುಖ್ಯಸ್ಥರಿಗೆ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಸೂಚನೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT