ಸೋಮವಾರ, ಆಗಸ್ಟ್ 8, 2022
22 °C
ಹೆಬ್ರಿ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಜಿ. ಜಗದೀಶ್

ಪಾಸಿಟಿವಿಟಿ ದರ ಇಳಿಕೆಗೆ ಒತ್ತು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೆಬ್ರಿ: ‘ಜಿಲ್ಲೆಯಾದ್ಯಂತ ಕೋವಿಡ್‌ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿದೆ. ಜೂನ್ 21ರ ಒಳಗೆ ಕೋವಿಡ್‌ ಪಾಸಿಟಿವ್‌ ದರವನ್ನು ಶೇ 5ಕ್ಕೆ ಇಳಿಸುವುದು ನಮ್ಮ ಉದ್ದೇಶ’ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದರು.

ಸೋಮವಾರ ಹೆಬ್ರಿ ಸರ್ಕಾರಿ ಆಸ್ಪತ್ರೆ, ತಾಲ್ಲೂಕು ಕಚೇರಿಗೆ ಭೇಟಿ ನೀಡಿದ ಬಳಿಕ ಅವರು ಮಾತನಾಡಿದರು. ‘ಅನ್‌ಲಾಕ್‌–1 ಮಾಡಿದ್ದರೂ ಸಹ ಸರ್ಕಾರ ಸೂಚಿಸಿರುವ ಅಂಗಡಿಗಳನ್ನು ಮಾತ್ರ ತೆರೆಯಬೇಕು. ಉಳಿದ ಚಟುವಟಿಕೆಗೆ ಅವಕಾಶ ಇಲ್ಲ. ಜನರ ಜೀವನ ಮುಖ್ಯ. ಉತ್ತಮ ಭವಿಷ್ಯದ ದೃಷ್ಟಿಯಿಂದ ಎಲ್ಲರೂ ನಿಯಮವನ್ನು ಕಡ್ಡಾಯವಾಗಿ ಪಾಲಿಸಬೇಕು’ ಎಂದರು.

ಅನ್‌ಲಾಕ್ ಪ್ರಕ್ರಿಯೆ ಜಾರಿಯಾದರೂ, ಎಲ್ಲ ಕಡೆಗಳಲ್ಲಿ ಕಟ್ಟುನಿಟ್ಟಿನ ನಿಗಾವಹಿಸುವಂತೆ ತಹಶೀಲ್ದಾರ್, ಪೊಲೀಸ್ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಲಾಕ್‌ಡೌನ್‌ ವೇಳೆ ಹೆಬ್ರಿಯ ಜನರು ಆಡಳಿತಕ್ಕೆ ಉತ್ತಮ ಸ್ಪಂದನೆ ನೀಡಿದ್ದಾರೆ ಎಂದು ಶ್ಲಾಘಿಸಿದರು.

ಸೋಂಕಿತರ ಪ್ರಮಾಣ ಶೇ 5ಕ್ಕಿಂತ ಕಡಿಮೆಯಾದಲ್ಲಿ ಮುಂದಿನ ವಾರದಿಂದ ಎಲ್ಲ ವ್ಯವಹಾರಗಳಿಗೆ ಅವಕಾಶ ಕಲ್ಪಿಸಿಕೊಡಲು ಯೋಚಿಸಲಾಗಿದೆ. ಸದ್ಯ ಶೇ 6ರಷ್ಟು ಸೋಂಕಿನ ಪ್ರಮಾಣವಿದ್ದು, ನಿಯಂತ್ರಣಕ್ಕೆ ಬರಲು ಸಾರ್ವಜನಿಕರ ಸಹಕಾರ ಮುಖ್ಯವಾಗಿದೆ ಎಂದು ಹೇಳಿದರು. 

ತಾಲ್ಲೂಕು ಕಚೇರಿಗೆ ಭೇಟಿನೀಡಿ ತಹಶೀಲ್ದಾರ್ ಪುರಂದರಕೆ ಅವರೊಂದಿಗೆ ಸಮಾಲೋಚನೆನಡೆಸಿದರು. ಹೆಬ್ರಿಯ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ, ಆಸ್ಪತ್ರೆಯ ಮುಖ್ಯಸ್ಥರೊಂದಿಗೆ ಚರ್ಚಿಸಿದರು. ಆಮ್ಲಜನಕ ಉತ್ಪಾದನಾ ಕೇಂದ್ರ, ಜನರೇಟರ್ ಕೊಠಡಿ, ಆಂಬುಲೆನ್ಸ್, ಗಂಟಲು ದ್ರವ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಆಸ್ಪತ್ರೆಯ ಹೊಸ ಆಂಬುಲೆನ್ಸ್ ನೋಂದಣಿ ವಿಳಂಬವಾಗಿದ್ದಕ್ಕೆ ಪ್ರಾದೇಶಿಕ ಸಾರಿಗೆ ಅಧಿಕಾರಿಯೊಂದಿಗೆ ಮಾತುಕತೆ ನಡೆಸಿದರು. ನೋಂದಣಿ ಪ್ರಕ್ರಿಯೆಯನ್ನು ಶೀಘ್ರ ಮಾಡಲಾಗುವುದು ಜಿ. ಜಗದೀಶ್ ತಿಳಿಸಿದರು.

ಕಂದಾಯ ನಿರೀಕ್ಷಕ ಹಿತೇಶ್ ಯು.ಬಿ, ವೈದ್ಯಾಧಿಕಾರಿ ಡಾ. ಸಂತೋಷ್
ಕುಮಾರ್, ಉಪ ತಹಶೀಲ್ದಾರ್‌ ಲತಾ ಶೆಟ್ಟಿ, ಕಂದಾಯ ಇಲಾಖೆ, ಆರೋಗ್ಯ ಇಲಾಖೆ ಸಿಬ್ಬಂದಿ ಇದ್ದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು