ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂತ್ರಸ್ತರಿಗೆ ವಸತಿ ಕಲ್ಪಿಸಲು ಪ್ರಯತ್ನ

ಗುರುಪುರ ಮಠದಗುಡ್ಡೆ ಪ್ರದೇಶಕ್ಕೆ ಜಿಲ್ಲಾಧಿಕಾರಿ ಭೇಟಿ
Last Updated 31 ಅಕ್ಟೋಬರ್ 2020, 15:58 IST
ಅಕ್ಷರ ಗಾತ್ರ

ಮಂಗಳೂರು: ಗುರುಪುರದ ಮಠದಗುಡ್ಡೆಯಲ್ಲಿ ನಾಲ್ಕು ತಿಂಗಳ ಹಿಂದೆ ಸಂಭವಿಸಿದ ಗುಡ್ಡ ಕುಸಿತದ ಪ್ರದೇಶಕ್ಕೆ ಶನಿವಾರ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಹಾಗೂ ಶಾಸಕ ಡಾ.ವೈ.ಭರತ್ ಶೆಟ್ಟಿ ಭೇಟಿ ನೀಡಿದರು. ಸಂತ್ರಸ್ತರ ಅಹವಾಲು ಸ್ವೀಕರಿಸಿ, ಪರಿಹಾರಗಳ ಬಗ್ಗೆ ಚರ್ಚಿಸಿದರು.

‘ಗುಡ್ಡ ಕುಸಿತದ ಬಳಿಕ ಸಂತ್ರಸ್ತರಾಗಿದ್ದು, ಬಾಡಿಗೆ ಮನೆಯಲ್ಲಿರುವವರಿಗೆ ಶೀಘ್ರ ಪರಿಹಾರ ಸಿಗಬೇಕು. ರಾಜೀವ್ ಗಾಂಧಿ ವಸತಿ ನಿಗಮದಿಂದ ನೆರವಿಗೆ ಪ್ರಯತ್ನಿಸಲಾಗುವುದು’ ಎಂದು ಜಿಲ್ಲಾಧಿಕಾರಿ ಹೇಳಿದರು.

ಗುರುಪುರ ಮಠದಗುಡ್ಡೆ ಸೈಟಿನ ಸಂತ್ರಸ್ತರಿಗೆ ಗಂಜಿಮಠ ಗ್ರಾಮ ಪಂಚಾಯಿತಿಯ ಮೊಗರು ಗ್ರಾಮದಲ್ಲಿ 1.5 ಎಕರೆ ಜಾಗ ಗುರುತಿಸಲಾಗಿದ್ದು, ಈ ಬಗ್ಗೆ ಕಾನೂನಾತ್ಮಕ ಪ್ರಕ್ರಿಯೆ ಆರಂಭಗೊಂಡಿದೆ. ಇದೇ ಗ್ರಾಮದ ಮತ್ತೊಂದೆಡೆ 2.5 ಎಕರೆ ಜಾಗ ಗುರುತಿಸಲಾಗಿದೆ. ಗುರುಪುರ ಪಂಚಾಯಿತಿ ವ್ಯಾಪ್ತಿಯಲ್ಲಿ ಸೂಕ್ತ ಜಾಗ ಇಲ್ಲ ಎಂದು ಮಂಗಳೂರು ತಹಶೀಲ್ದಾರ್ ಗುರುಪ್ರಸಾದ್ ಹೇಳಿದರು.

‘ವರ್ಷಗಳಿಂದ ಒಂದೆಡೆ ಇದ್ದು, ಕಾರಣಾಂತರಗಳಿಂದ ಏಕಾಏಕಿಯಾಗಿ ಬೇರೆಡೆಗೆ ಸ್ಥಳಾಂತರಗೊಳ್ಳಲು ಕಷ್ಟವಾಗುತ್ತದೆ ಎಂಬುದು ಸತ್ಯ. ಆದರೆ ಈಗಾಗಲೇ ಕಷ್ಟ ಅನುಭವಿಸಿರುವ ನೀವು ಮತ್ತೆ ಇಲ್ಲೇ ಮನೆ ಕಟ್ಟಿಕೊಂಡು ಕಷ್ಟ ಅನುಭವಿಸುತ್ತೀರಾ? ಇಲ್ಲಿ ಶಾಶ್ವತ ಮನೆ ನಿರ್ಮಿಸುವ ಸಾಧ್ಯತೆ ಕಡಿಮೆ ಇದೆ. ಸ್ಥಳಾಂತರಗೊಳ್ಳುವುದು ಉಚಿತವಾದದ್ದು’ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಜಿಲ್ಲಾ ಪಂಚಾಯಿತಿ ಸದಸ್ಯ ಯು.ಪಿ. ಇಬ್ರಾಹಿಂ, ತಾಲ್ಲೂಕು ಪಂಚಾಯಿತಿ ಸದಸ್ಯ ಸಚಿನ್ ಅಡಪ, ಉಪ ವಿಭಾಗಾಧಿಕಾರಿ ರವಿಚಂದ್ರ ನಾಯಕ್, ಉಪತಹಶೀಲ್ದಾರ್ ಶಿವಪ್ರಸಾದ್, ಕಂದಾಯ ನಿರೀಕ್ಷಕ ಆಸೀಫ್, ಪಿಡಿಒ ಅಬೂಬಕ್ಕರ್, ಬಿಜೆಪಿ ಮುಖಂಡರಾದ ರಾಜೇಶ್ ಸುವರ್ಣ, ಶ್ರೀಕರ ಶೆಟ್ಟಿ, ಸೋಮಯ್ಯ, ನಳಿನಿ ಶೆಟ್ಟಿ, ಸೇಸಮ್ಮ, ಜಲಜಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT