ಭಾನುವಾರ, 21 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುಬ್ರಹ್ಮಣ್ಯ: ಡಿ.ಕೆ.ಶಿವಕುಮಾರ್ ಕುಕ್ಕೆ ಭೇಟಿ

Published 26 ಮಾರ್ಚ್ 2024, 14:15 IST
Last Updated 26 ಮಾರ್ಚ್ 2024, 14:15 IST
ಅಕ್ಷರ ಗಾತ್ರ

ಸುಬ್ರಹ್ಮಣ್ಯ: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮಂಗಳವಾರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದರು.

ದೇವಳದಲ್ಲಿ ವಿಶೇಷ ಪೂಜೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಬಳಿಕ ಹೊಸಳಿಗಮ್ಮ ದೈವದ ದರ್ಶನ ಮಾಡಿ ಪ್ರಸಾದ ಸ್ವೀಕರಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಡಿಕೆಶಿ, ‘ರಾಜ್ಯದಲ್ಲಿ ಕಾಂಗ್ರೆಸ್ ಅಲೆ ಇದೆ. ಅದರೊಂದಿಗೆ ದೇವರ ಆಶೀರ್ವಾದ ಬೇಡಲು ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಕೊಲ್ಲೂರು, ಶೃಂಗೇರಿ, ಗೌರಿಗದ್ದೆ, ಗೋಕರ್ಣ ದೇವಸ್ಥಾನಗಳಿಗೆ ತೆರಳಲಿದ್ದೇನೆ. ನಮಗೆ ದೇವರಲ್ಲಿ, ಧರ್ಮದ ಬಗ್ಗೆ ಸಂಪೂರ್ಣ ನಂಬಿಕೆ ಇದೆ’ ಎಂದರು.

‘ಈ ಹಿಂದೆ ನಡೆದ ವಿಧಾನಸಭೆ ಚುನಾವಣೆಯಲ್ಲಿಯೂ ದೇವರು ನಮ್ಮನ್ನ ಕೈ ಬಿಟ್ಟಿಲ್ಲ. ಒಳ್ಳೆಯದನ್ನೇ ಮಾಡಿದ್ದಾರೆ. ರಾಜ್ಯದ ಜನತೆಗೆ ಒಳ್ಳೆಯದಾಗಲಿ’ ಎಂದರು.

ಕೂಜಿಮಲೆ ಹಾಗೂ ಐನೆಕಿದು ಗ್ರಾಮಗಳ ಮನೆಗಳಿಗೆ ಬಂದಿರುವ ಶಂಕಿತರ ಬಗ್ಗೆ ಕೇಳಿದ ಪ್ರಶ್ನೆಗೆ, ‘ಈ ಬಗ್ಗೆ ಪೊಲೀಸ್ ಅಧಿಕಾರಿಗಳೊಂದಿಗೆ ಮಾತನಾಡುತ್ತೇನೆ. ಕೋವಿ ಪರವಾನಗಿ ಇರುವವರು ಚುನಾವಣೆ ಸಂಬಂಧ ಠಾಣೆಗೆ ಒಪ್ಪಿಸಬೇಕೆ ಬೇಡವೇ ಎಂಬ ಬಗ್ಗೆ ಜಿಲ್ಲಾಧಿಕಾರಿ ಜತೆ ಚರ್ಚಿಸಲಾಗುವುದು’ ಎಂದರು.

ಗೇರು ಅಭಿವೃದ್ಧಿ ಮಂಡಳಿ ಅಧ್ಯಕ್ಷೆ ಮಮತಾ ಗಟ್ಟಿ, ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ, ಕಡಬ ಬ್ಲಾಕ್ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ, ಮುಖಂಡರಾದ ಭರತ್ ಮುಂಡೋಡಿ, ಧನಂಜಯ ಅಡ್ಪಂಗಾಯ, ಅಶೋಕ ನೆಕ್ರಾಜೆ, ಪಿ.ಬಿ.ವರ್ಗೀಸ್‌, ಮಾಧವ ಮಾನಾಡು, ಕೃಷ್ಣಪ್ಪ, ದಿನೇಶ್ ಮಡ್ತಿಲ, ಹರೀಶ ಇಂಜಾಡಿ, ರಾಜೀವ್ ರೈ, ವಿಜಯಕುಮಾರ ಸೊರಕೆ, ವಿಮಲಾ ರಂಗಯ್ಯ, ಸರಸ್ವತಿ ಕಾಮತ್, ಶಿವರಾಮ ರೈ, ಕೃಷ್ಣಮೂರ್ತಿ ಭಟ್ ಭಾಗವಹಿಸಿದ್ದರು.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮಂಗಳವಾರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದರು
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮಂಗಳವಾರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT