ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದುಶ್ಚಟ ತ್ಯಜಿಸಲು ದೃಢ ಸಂಕಲ್ಪ ಅಗತ್ಯ: ಹೆಗ್ಗಡೆ

1,540ನೇ ಮದ್ಯವರ್ಜನ ಶಿಬಿರ ಸಮಾರೋಪ: ಸ್ವಾಭಿಮಾನದ ಬದುಕಿಗೆ ಸಲಹೆ
Last Updated 15 ಜೂನ್ 2022, 6:40 IST
ಅಕ್ಷರ ಗಾತ್ರ

ಬಂಟ್ವಾಳ: ಮದ್ಯಪಾನ ಮತ್ತಿತರ ದುಶ್ಚಟದಿಂದ ಮುಕ್ತರಾಗಲು ದೃಢ ಸಂಕಲ್ಪ ಅಗತ್ಯವಿದೆ. ಮದ್ಯವರ್ಜನ ಶಿಬಿರಾರ್ಥಿಗಳು ಯಾವುದೇ ಸಂದರ್ಭದಲ್ಲಿ ಕುಡಿತದ ಸಹವಾಸಕ್ಕೆ ಹೋಗದೆ ಮನಸ್ಸು ಚಂಚಲವಾಗದಂತೆ ಪ್ರತಿದಿನ ಸ್ವಾಭಿಮಾನದ ಬದುಕು ನಡೆಸಬೇಕು ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಹೇಳಿದರು.

ಇಲ್ಲಿನ ಬಿ.ಸಿ.ರೋಡು ಲಯನ್ಸ್ ಸಭಾಂಗಣದಲ್ಲಿ ಮಂಗಳವಾರ ಸಮಾರೋಪಗೊಂಡ 1,540ನೇ ಮದ್ಯವರ್ಜನ‌ ಶಿಬಿರದಲ್ಲಿ ಅವರು ಸಮಾರೋಪ ಭಾಷಣ ಮಾಡಿದರು.

ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಮಾತನಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಜನಜಾಗೃತಿ ವೇದಿಕೆಯ ಪರಿಶ್ರಮ ಸಮಾಜಕ್ಕೆ ಸಹಕಾರಿ ಆಗಿದೆ ಎಂದರು.

ಮಾಣಿಲ ಶ್ರೀಧಾಮ ಮೋಹನದಾಸ ಪರಮಹಂಸ ಸ್ವಾಮೀಜಿ ಆಶೀರ್ವಚನ ನೀಡಿದರು.

ಜನಜಾಗೃತಿ ವೇದಿಕೆ ನೂತನ ಅಧ್ಯಕ್ಷ ರೊನಾಲ್ಡ್ ಡಿಸೋಜ ಅವರಿಗೆ ಜವಾಬ್ದಾರಿ ಹಸ್ತಾಂತರಿಸಲಾಯಿತು.
ಶಿಬಿರದ ವ್ಯವಸ್ಥಾಪನಾ ಸಮಿತಿ ಗೌರವಾಧ್ಯಕ್ಷ ಡಾ. ವಸಂತ ಬಾಳಿಗ, ಅಧ್ಯಕ್ಷ ಐತಪ್ಪ ಆಳ್ವ ಸುಜೀರುಗುತ್ತು, ಸಮಿತಿ ಗೌರವ ಸಲಹೆಗಾರ ಶ್ರೀನಿವಾಸ ಪೂಜಾರಿ ಮೆಲ್ಕಾರ್, ಮನ್ಮಥ ರಾಜ್ ಜೈನ್ ಇದ್ದರು.

ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿನ್ಸೆಂಟ್ ಪಾಯಸ್ ಕುಟುಂಬ ದಿನ ನಡೆಸಿಕೊಟ್ಟರು.
ಜಿಲ್ಲಾ ನಿರ್ದೇಶಕ ಸತೀಶ್ ಶೆಟ್ಟಿ ಮಾತನಾಡಿದರು. ಯೋಜನಾಧಿಕಾರಿ ಜಯಾನಂದ ಪಿ. , ಉಡುಪಿ ಪ್ರಾದೇಶಿಕ ಕಚೇರಿ ಯೋಜನಾಧಿಕಾರಿ ತಿಮ್ಮಯ್ಯ ನಾಯ್ಕ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT