ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ದೇಶ ಭಕ್ತ, ದೇಶ ವಿರೋಧಿಗಳ ನಡುವಿನ ನಿರ್ಣಾಯಕ ಚುನಾವಣೆ: ಕ್ಯಾ.ಬೃಜೇಶ್ ಚೌಟ

Published 22 ಮಾರ್ಚ್ 2024, 13:38 IST
Last Updated 22 ಮಾರ್ಚ್ 2024, 13:38 IST
ಅಕ್ಷರ ಗಾತ್ರ

ಪುತ್ತೂರು: ‘2024ರ ಚುನಾವಣೆ ದೇಶ ಭಕ್ತರ ಮತ್ತು ದೇಶ ವಿರೋಧಿಗಳ ನಡುವಿನ ನಿರ್ಣಾಯಕ ಚುನಾವಣೆ’ ಎಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ.ಬೃಜೇಶ್ ಚೌಟ ಹೇಳಿದರು.

ಪುತ್ತೂರಿನಲ್ಲಿ ಶುಕ್ರವಾರ ನಡೆದ ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಅವರು ಮಾತನಾಡಿದರು.

ಬಿಜೆಪಿಯು ವಿಚಾರದ ಆಧಾರದಲ್ಲಿ ಕೆಲಸ ಮಾಡುವ ಪಕ್ಷ. ಕಾರ್ಯಕರ್ತರ ನಂಬಿಕೆ, ಜನರ ಮೇಲಿನ ವಿಶ್ವಾಸ, ವಿಚಾರದ ಬದ್ಧತೆಗೆ ಅನುಗುಣವಾಗಿ ಕೆಲಸ ಮಾಡಿರುವ ಪ್ರಧಾನಿ ನರೇಂದ್ರ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿ ಆಗಬೇಕೆಂಬ ಸ್ಪಷ್ಟ ಸಂದೇಶವನ್ನು ಮನೆ ಮನೆಗೆ ತಿಳಿಸಬೇಕಾಗಿದೆ ಎಂದರು.

ಮಾಜಿ ಶಾಸಕ ಸಂಜೀವ ಮಠಂದೂರು ಮಾತನಾಡಿ, ಯುಪಿಎ ಭ್ರಷ್ಟಾಚಾರದ ಸರ್ಕಾರವಾಗಿತ್ತು. ಮಹಾತ್ಮಗಾಂಧಿಯ ಗ್ರಾಮ ಸ್ವರಾಜ್ಯ ಕಲ್ಪನೆಯನ್ನಿಟ್ಟುಕೊಂಡ ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮಗಳಿಂದಾಗಿ ಭಾರತ ಭ್ರಷ್ಟಾಚಾರ ಮುಕ್ತವಾಗಿದೆ ಎಂದರು.

ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಮಾತನಾಡಿ, ನಮ್ಮ ಅಭ್ಯರ್ಥಿ ಬೃಜೇಶ್ ಚೌಟ ಅವರನ್ನು ಹೆಚ್ಚು ಮತಗಳ ಅಂತರದಿಂದ ಗೆಲ್ಲಿಸಬೇಕೆಂದು ನಾವು ಸಂಕಲ್ಪ ಮಾಡಿದ್ದೇವೆ ಎಂದರು.

ಬಿಜೆಪಿ ವಿಭಾಗ ಸಹ ಸಂಚಾಲಕ ಗೋಪಾಲಕೃಷ್ಣ ಹೇರಳೆ, ಮಾಜಿ ಶಾಸಕಿ ಮಲ್ಲಿಕಾಪ್ರಸಾದ್, ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಪುತ್ತೂರು ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕ ಚನಿಲ ತಿಮ್ಮಪ್ಪ ಶೆಟ್ಟಿ, ವಿಧಾನಸಭಾ ಕ್ಷೇತ್ರದ ಉಸ್ತುವಾರಿ ಸುಲೋಚನಾ ಭಟ್, ಚುನಾವಣಾ ನಿರ್ವಹಣಾ ಸಮಿತಿ ಸಹಸಂಚಾಲಕ ಉಮೇಶ್ ಕೋಡಿಬೈಲು, ಬಿಜೆಪಿ ಪುತ್ತೂರು ಮಂಡಲದ ಉಸ್ತುವಾರಿ ಸುನಿಲ್ ಆಳ್ವ, ರಾಜ್ಯ ಬಿಜೆಪಿ ಒಬಿಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಆರ್.ಸಿ.ನಾರಾಯಣ, ಜಿಲ್ಲಾ ಬಿಜೆಪಿ ಕಾರ್ಯದರ್ಶಿ ವಿದ್ಯಾಗೌರಿ, ಜಿಲ್ಲಾ ಎಸ್‌ಟಿ ಮೋರ್ಚಾ ಕಾರ್ಯದರ್ಶಿ ಹರೀಶ್ ಬಿಜತ್ರೆ, ಬಿಜೆಪಿ ನಗರ ಮಂಡಲದ ಅಧ್ಯಕ್ಷ ಪಿ.ಜಿ.ಜಗನ್ನಿವಾಸ ರಾವ್ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT