ಬುಧವಾರ, 17 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇನ್ಫೊಸಿಸ್ ಸ್ಪ್ರಿಂಗ್ ಬೋರ್ಡ್ ಜಾಹೀರಾತಿನಲ್ಲಿ ಪುತ್ತೂರಿನ ದೀಕ್ಷಿತ್

Published 28 ಮಾರ್ಚ್ 2024, 16:12 IST
Last Updated 28 ಮಾರ್ಚ್ 2024, 16:12 IST
ಅಕ್ಷರ ಗಾತ್ರ

ಮಂಗಳೂರು: ಇನ್ಫೊಸಿಸ್‌ ಸ್ಪ್ರಿಂಗ್ ಬೋರ್ಡ್ ವೇದಿಕೆಯು ಇತ್ತೀಚಿಗೆ ಬಿಡುಗಡೆಗೊಳಿಸಿರುವ ಜಾಹೀರಾತಿನಲ್ಲಿ ಪುತ್ತೂರಿನ ಬನ್ನೂರು ನಿವಾಸಿ ದೀಕ್ಷಿತ್ ಕುಮಾರ್ ಕಾಣಿಸಿಕೊಂಡಿದ್ದಾರೆ. 

ಇನ್ಫೊಸಿಸ್ ಸಂಸ್ಥೆಯು ಉಚಿತವಾಗಿ ಒದಗಿಸುವ ಕಲಿಕಾ ವೇದಿಕೆ ‘ಇನ್ಫೊಸಿಸ್‌ ಸ್ಪ್ರಿಂಗ್ ಬೋರ್ಡ್’ಗೆ ಕೊಡುಗೆ ನೀಡಿದ ನಾಲ್ವರನ್ನು ಆಯ್ಕೆ ಮಾಡಿ  ಜಾಹೀರಾತನ್ನು ಸಿದ್ಧಪಡಿಸಿತ್ತು. ಒಬ್ಬ ಶಿಕ್ಷಕ ವಿದ್ಯಾರ್ಥಿಗಳಿಗೆ ತರಗತಿಯಿಂದ ಆಚೆಗೆ ಆನ್ಲೈನ್ ಶಿಕ್ಷಣವನ್ನು ಹೇಗೆ ಪರಿಚಯಿಸಬಹುದು ಎಂಬ ನೈಜ ಘಟನೆ ಆಧರಿತ ಜಾಹೀರಾತು ಇದಾಗಿದೆ. ಸಾಮಾಜಿಕ ಜಾಲತಾಣಗಳ ಮೂಲಕ ಜಗತ್ತಿನೆಲ್ಲೆಡೆ ಇದು ಪ್ರಸಾರವಾಗಲಿದೆ.  

ಯಾವುದೇ ವಿದ್ಯಾರ್ಥಿಗಳು ‘ಇನ್ಫೊಸಿಸ್‌ ಸ್ಪ್ರಿಂಗ್ ಬೋರ್ಡ್’  ವೇದಿಕೆಯಲ್ಲಿ ನೋಂದಾಯಿಸಿಕೊಂಡು ತಮ್ಮ ಪಠ್ಯ ಹಾಗೂ ಪಠ್ಯೇತರ ವಿಷಯಗಳಿಗೆ ಸಂಬಂಧಿಸಿದಂತೆ 20 ಸಾವಿರಕ್ಕೂ ಅಧಿಕ ಕೋರ್ಸುಗಳನ್ನು ಉಚಿತವಾಗಿ ಕಲಿಯಲು ಅವಕಾಶವಿದೆ. ಕಾಲೇಜುಗಳಲ್ಲಿ ವಿಶೇಷ ಕಾರ್ಯಾಗಾರಗಳ ಮೂಲಕ ದೇಶಾದ್ಯಂತ 50 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಈ ವೇದಿಕೆಯನ್ನು ಪರಿಚಯಿಸಲಾಗಿದೆ.

ಚಿಕ್ಕಮಗಳೂರಿನ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ದೀಕ್ಷಿತ್‌, ಸ್ಪ್ರಿಂಗ್ ಬೋರ್ಡ್‌ನಲ್ಲಿ ನೋಂದಣಿ ಮಾಡಿಸುವ ಕುರಿತ ವಿಡಿಯೊವನ್ನು ಸಿದ್ಧಪಡಿಸಿದ್ದರು. ಅದನ್ನು ತಮ್ಮ ಯೂಟ್ಯೂಬ್ ಚಾನೆಲ್ ಮೂಲಕ ಹಂಚಿಕೊಂಡಿದ್ದರು. ಇದು ಇನ್ಫೊಸಿಸ್ ಸಂಸ್ಥೆಯ ಪ್ರಶಂಸೆಗೆ ಪಾತ್ರವಾಗಿತ್ತು ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT