ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂತ್ಯೋದಯ ಕಲ್ಪನೆ ಸರ್ವಕಾಲಕ್ಕೂ ಪ್ರಸ್ತುತ: ವಿಜಯ ಕುಮಾರ್ ಶೆಟ್ಟಿ

ದೀನ ದಯಾಳ್‌ ಉಪಾಧ್ಯಾಯ ಜನ್ಮದಿನಾಚರಣೆ
Last Updated 26 ಸೆಪ್ಟೆಂಬರ್ 2021, 3:25 IST
ಅಕ್ಷರ ಗಾತ್ರ

ಮಂಗಳೂರು: ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ ವತಿಯಿಂದ ಜನಸಂಘದ ಸ್ಥಾಪಕ ಪಂಡಿತ್‌ ದೀನದಯಾಳ್‌ ಉಪಾಧ್ಯಾಯ ಅವರ105 ನೇ ಜನ್ಮದಿನಾಚರಣೆ ಕಾರ್ಯಕ್ರಮವನ್ನು ವೈಶ್ಯ ಎಜುಕೇಶನ್ ಸೊಸೈಟಿ ಸಭಾಂಗಣದಲ್ಲಿ ಶನಿವಾರ ನಡೆಯಿತು.

ಅಧ್ಯಕ್ಷತೆ ವಹಿಸಿದ್ದ ಮಂಡಲ ಅಧ್ಯಕ್ಷ ವಿಜಯ ಕುಮಾರ್ ಶೆಟ್ಟಿ ಮಾತನಾಡಿ, ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಅವರ ಚಿಂತನೆ, ವಿಚಾರ, ಅವರು ಪ್ರತಿಪಾದಿಸಿದ ಏಕಾತ್ಮ ಮಾನವತಾ ಸಿದ್ಧಾಂತ ಹಾಗೂ ಅಂತ್ಯೋದಯದ ಕಲ್ಪನೆ ಇವತ್ತಿಗೂ ಪ್ರಸ್ತುತ ಎಂದು ಹೇಳಿದರು.

ಶಾಸಕ ಡಿ. ವೇದವ್ಯಾಸ ಕಾಮತ ಅವರು, ಪಂಡಿತ್‌ ದೀನದಯಾಳ್‌ ಉಪಾಧ್ಯಾಯ ಅವರ ಭಾವಚಿತ್ರಕ್ಕೆ ದೀಪ ಬೆಳಗಿಸಿ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮುಡಾ ಅಧ್ಯಕ್ಷ ರವಿಶಂಕರ್ ಮಿಜಾರ್ ಅವರು, ಪಂಡಿತ್‌ ದೀನದಯಾಳ್‌ ಉಪಾಧ್ಯಾಯ ಅವರ ಜೀವನದ ಬಗ್ಗೆ ಮಾತನಾಡಿದರು.

ಮಂಡಲ ಉಪಾಧ್ಯಕ್ಷ ಅಜಯ ಕುಲಶೇಖರ್‌, ಪ್ರಧಾನಿ ಮೋದಿಯವರ 71ನೇ ಜನ್ಮದಿನದ ಪ್ರಯುಕ್ತ ಬಿಜೆಪಿ ಹಮ್ಮಿಕೊಂಡಿರುವ ಸೇವಾ ಮತ್ತು ಸಮರ್ಪಣಾ ಅಭಿಯಾನದ ಅಂಗವಾಗಿ ಪ್ರತಿಜ್ಞಾ ವಿಧಿ ಬೋಧಿಸಿದರು.

ಮಂಡಲ ಪ್ರಧಾನ ಕಾರ್ಯದರ್ಶಿ ರೂಪಾ ಡಿ. ಬಂಗೇರ ಸ್ವಾಗತಿಸಿದರು. ಮಂಡಲ ಕಾರ್ಯದರ್ಶಿ ಲಲ್ಲೇಶ್ ವಂದಿಸಿದರು. ವಿಧಾನ ಪರಿಷತ್ ಮಾಜಿ ಸದಸ್ಯ ಮೋನಪ್ಪ ಭಂಡಾರಿ, ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ನಿತಿನ್ ಕುಮಾರ್, ದಿ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಕಂಪನಿಯ ಅಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರ್, ಮೇಯರ್‌ ಪ್ರೇಮಾನಂದ ಶೆಟ್ಟಿ, ಬಿಜೆಪಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಸುಧೀರ್ ಶೆಟ್ಟಿ ಕಣ್ಣೂರ್, ಮಂಡಲದ ಪದಾಧಿಕಾರಿಗಳಾದ ಸುರೇಂದ್ರ ಜೆ., ಕಿರಣ್ ರೈ, ರಮೇಶ್ ಹೆಗ್ಡೆ, ರಮೇಶ್ ಕಂಡೆಟ್ಟು, ಮೀರಾ ಕರ್ಕೇರ, ಶ್ರೀನಿವಾಸ್ ಶೇಟ್, ವಿನೋದ್ ಮೆಂಡನ್, ಸುರೇಖಾ ಹೆಗ್ಡೆ, ಪಾಲಿಕೆ ಸದಸ್ಯರು, ಮಹಾಶಕ್ತಿ ಕೇಂದ್ರ ಪದಾಧಿಕಾರಿಗಳು, ವಿವಿಧ ಮೋರ್ಚಾ ಹಾಗೂ ಪ್ರಕೋಷ್ಠಗಳ ಪದಾಧಿಕಾರಿಗಳು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT