ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಪ್ಪಿನಂಗಡಿ | ಬೀದಿ ನಾಯಿ ದಾಳಿ; ಜಿಂಕೆ ಸಾವು

Published 1 ಜುಲೈ 2023, 16:03 IST
Last Updated 1 ಜುಲೈ 2023, 16:03 IST
ಅಕ್ಷರ ಗಾತ್ರ

ಉಪ್ಪಿನಂಗಡಿ: ಇಲ್ಲಿನ ವಲಯ ಅರಣ್ಯ ಇಲಾಖಾ ವ್ಯಾಪ್ತಿಯ ಸರಳೀಕಟ್ಟೆ ಹೊಸಮುಗೇರು ಎಂಬಲ್ಲಿ ಬೀದಿ ನಾಯಿಯ ದಾಳಿಗೆ ಸಿಲುಕಿ ಜಿಂಕೆಯೊಂದು ಸಾವನ್ನಪ್ಪಿದ ಘಟನೆ ಶನಿವಾರ ಸಂಭವಿಸಿದೆ.

ಸುಮಾರು 6ರಿಂದ 8 ವರ್ಷ ಪ್ರಾಯದ ಗಂಡು ಜಿಂಕೆ ಶನಿವಾರ ನಸುಕಿನ ವೇಳೆ ಬಾರ್ಯ ಅರಣ್ಯದಿಂದ ಮೇಯುತ್ತ ಕಾಡಿನ ಅಂಚಿಗೆ ಬಂದಿದ್ದು, ಬೀದಿನಾಯಿಯೊಂದು ಜಿಂಕೆಯ ಮೇಲೆ ದಾಳಿ ನಡೆಸಿದೆ. ನಾಯಿಯ ದಾಳಿಗೆ ಸಿಲುಕಿ ಗಂಭೀರ ಗಾಯಗೊಂಡ ಜಿಂಕೆಯನ್ನು ಕಂಡ ಸ್ಥಳೀಯರು, ಅರಣ್ಯ ಇಲಾಖಾಧಿಕಾರಿಗಳಿಗೆ ಮಾಹಿತಿ ನೀಡಿ ಆಸ್ಪತ್ರೆಗೆ ದಾಖಲಿಸುವಂತೆ ವಿನಂತಿಸಿದ್ದರು.

ಅರಣ್ಯ ಇಲಾಖಾಧಿಕಾರಿಗಳು ಗಾಯಗೊಂಡ ಜಿಂಕೆಯನ್ನು ಸಮೀಪದ ಪಶು ಚಿಕಿತ್ಸಾಲಯಕ್ಕೆ ಕೊಂಡೊಯ್ಯುವಷ್ಟರಲ್ಲಿ ಜಿಂಕೆ ಸಾವನ್ನಪ್ಪಿತ್ತು. ಉಪ ಅರಣ್ಯಾಧಿಕಾರಿಗಳಾದ ಸಂದೀಪ್, ಕ್ಯಾರೆಲ್ ಮೊಂತೆರೊ, ಅರಣ್ಯ ವೀಕ್ಷಕ ಪ್ರತಾಪ, ವಾಹನ ಚಾಲಕ ಕಿಶೋರ್ ಮತ್ತು ತಂಡದವರು ಜಿಂಕೆಯ ಮೃತ ದೇಹವನ್ನು ಮಣ್ಣಗುಂಡಿಯಲ್ಲಿರುವ ಅರಣ್ಯ ಇಲಾಖೆಯ ಕೇಂದ್ರೀಯ ನಾಟ ಕೇಂದ್ರದಲ್ಲಿ ಅರಣ್ಯ ಸಹಾಯಕ ಸಂರಕ್ಷಣಾಧಿಕಾರಿ ಕಾರ್ಯಪ್ಪ ಉಪಸ್ಥಿತಿಯಲ್ಲಿ ಅಂತ್ಯ ಸಂಸ್ಕಾರ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT