ಸೋಮವಾರ, ಮಾರ್ಚ್ 20, 2023
24 °C

ಶರಣ್ ಪಂಪ್‌ವೆಲ್ ಬಂಧನಕ್ಕೆ ಮೃತ ಫಾಝಿಲ್ ತಂದೆ ಉಮರ್ ಫಾರೂಕ್ ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: 'ಪ್ರವೀಣ್ ನೆಟ್ಟಾರು ಹತ್ಯೆಗೆ ಪ್ರತೀಕಾರವಾಗಿ ಫಾಝಿಲ್ ಹತ್ಯೆ ನಡೆಸಲಾಗಿದೆ' ಎಂದು ಹೇಳಿಕೆ ನೀಡಿರುವ ವಿಶ್ವ ಹಿಂದೂ ಪರಿಷತ್ತಿನ ಮುಖಂಡ ಶರಣ್ ಪಂಪ್‌ವೆಲ್ ಅವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಬೇಕು ಎಂದು ಫಾಝಿಲ್ ಅವರ ತಂದೆ ಸುರತ್ಕಲ್‌ ಮಂಗಳಪೇಟೆಯ ಉಮರ್ ಫಾರೂಕ್ ಅವರು ಒತ್ತಾಯಿಸಿದ್ದಾರೆ.

ಅವರು ನಗರ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಅವರನ್ನು ಭೇಟಿಯಾಗಿ ಈ ಕುರಿತು ಸೋಮವಾರ ಮನವಿ ಸಲ್ಲಿಸಿದರು.

'ಫಾಝಿಲ್ ಹತ್ಯೆಯನ್ನು ತುಮಕೂರಿನಲ್ಲಿ ಭಾನುವಾರ ನಡೆದ ಸಮಾವೇಶದಲ್ಲಿ ಶರಣ್ ಪಂಪ್‌ವೆಲ್ ಸಮರ್ಥಿಸಿಕೊಂಡಿದ್ದಾರೆ. ನನ್ನ ಮಗನ ಹತ್ಯೆ ವಿಚಾರವಾಗಿ ಅವರಿಗೆ ಹೆಚ್ಚಿನ ಮಾಹಿತಿ ಇದೆ. ಹಾಗಾಗಿ ಅವರನ್ನು ಬಂಧಿಸಿ ವಿಚಾರಣೆಗೊಳಪಡಿಸಬೇಕು'ಎಂದು ಉಮರ್ ಫಾರೂಕ್ ಒತ್ತಾಯಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು