ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜುಗಳ ಅರೆಕಾಲಿಕ ಉಪನ್ಯಾಸಕರ ವೇತನ ಪಾವತಿಗೆ ಆಗ್ರಹ

Published 18 ಜುಲೈ 2023, 7:24 IST
Last Updated 18 ಜುಲೈ 2023, 7:24 IST
ಅಕ್ಷರ ಗಾತ್ರ

ಮಂಗಳೂರು: ರಾಜ್ಯದಲ್ಲಿರುವ 89 ಕರ್ನಾಟಕ ಸರ್ಕಾರಿ ಪಾಲಿಟೆಕ್ನಿಕ್ ಮತ್ತು 13 ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಕೆಲಸ ಮಾಡುತ್ತಿರುವ ಅರೆಕಾಲಿಕ ಉಪನ್ಯಾಸಕರಿಗೆ ಬಾಕಿ ಇರುವ ನಾಲ್ಕು ತಿಂಗಳ ವೇತನವನ್ನು ಶೀಘ್ರ ಪಾವತಿಸಬೇಕು ಎಂದು ಅಖಿಲ ಕರ್ನಾಟಕ ಸರ್ಕಾರಿ ಪಾಲಿಟೆಕ್ನಿಕ್ ಅರೆಕಾಲಿಕ ಉಪನ್ಯಾಸಕರ ಸಂಘ ಆಗ್ರಹಿಸಿದೆ.

ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಎಂ. ಪ್ರಶಾಂತ ಅವರು, ರಾಜ್ಯದಲ್ಲಿ ಸುಮಾರು 1,200 ಅರೆಕಾಲಿಕ ಉಪನ್ಯಾಸಕರು ಸರ್ಕಾರಿ ಪಾಲಿಟೆಕ್ನಿಕ್ ಮತ್ತು ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರಿಗೆ ಕಳೆದ ಮಾರ್ಚ್ ನಿಂದ ವೇತನ ದೊರೆತಿಲ್ಲ. ಪ್ರಸ್ತುತ ನಾವು ವಾರಕ್ಕೆ 10 ತಾಸು ಕೆಲಸ ಮಾಡುತ್ತಿದ್ದು, ಮಾಸಿಕ ₹12,500 ವೇತನ ಪಡೆಯುತ್ತಿದ್ದೇವೆ. ಕಾಲೇಜು ಶಿಕ್ಷಣ ಇಲಾಖೆ ಅತಿಥಿ ಉಪನ್ಯಾಸಕರಿಗೆ ಹೋಲಿಸಿದರೆ ಇದು ಕಡಿಮೆ ಆಗಿದ್ದು, ನಮಗೆ ಮಾಸಿಕ ಕನಿಷ್ಠ ₹25ಸಾವಿರ ವೇತನ ನೀಡಬೇಕು ಎಂದು ಒತ್ತಾಯಿಸಿದರು.

ನಾಲ್ಕಾರು ದಿನಗಳ ಹಿಂದೆ ರಾಜ್ಯ ಉನ್ನತ ಶಿಕ್ಷಣ ಸಚಿವರನ್ನು ಭೇಟಿ ಮಾಡಿ ವಿಷಯ ಮನವರಿಕೆ ಮಾಡಿಕೊಟ್ಟಿದ್ದು, ಅವರು ಸಮಸ್ಯೆ ಪರಿಹರಿಸುವ ಭರವಸೆ ನೀಡಿರುವುದು ಆಶಾಭಾವ ಮೂಡಿಸಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT