ಶನಿವಾರ, ಆಗಸ್ಟ್ 13, 2022
27 °C

ದಕ್ಷಿಣ ಕನ್ನಡ | ಪಠ್ಯದಲ್ಲಿ ಕಿಞಣ್ಣ ರೈ ಹೆಸರು ಮರುಸೇರ್ಪಡೆಯಾಗಲಿ: ಹರೀಶ್ ಶೆಟ್ಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಂಗಳೂರು: ರೋಹಿತ್ ಚಕ್ರತೀರ್ಥ ಅಧ್ಯಕ್ಷತೆಯ ಪಠ್ಯಪುಸ್ತಕ ಪರಿಷ್ಕರಣ ಸಮಿತಿಯು 7ನೇ ತರಗತಿಯ ಸಮಾಜ ವಿಜ್ಞಾನ ಪುಸ್ತಕದಲ್ಲಿ ಕಯ್ಯಾರ ಕಿಂಞಣ್ಣ ರೈ ಅವರ ಹೆಸರನ್ನು ಕೈಬಿಟ್ಟಿರುವುದು ಸರಿಯಲ್ಲ ಎಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಅವರು ಹೇಳಿದ್ದಾರೆ.

ಕಯ್ಯಾರರು ಕರ್ನಾಟಕ ಏಕೀಕರಣಕ್ಕಾಗಿ ತನ್ನ ಕೊನೆ ಉಸಿರಿನ ತನಕ ಹೋರಾಟ ಮಾಡಿದ್ದರು ಎಂದು ಕರ್ನಾಟಕ ಏಕೀಕರಣ ಹಾಗೂ ಗಡಿ ವಿವಾದಗಳು ಎಂಬ ಪಠ್ಯದಲ್ಲಿ ಇತ್ತು. ಈಗ ಆ ವಾಕ್ಯ ತೆಗೆದು ಮಂಜೇಶ್ವರ ಗೋವಿಂದ ಪೈಯವರ ಹೆಸರು ಸೇರಿಸಲಾಗಿದೆ. ಗೋವಿಂದ ಪೈಯವರಿಗೆ ಏಕೀಕರಣ ವಿಷಯದಲ್ಲಿ ಪರಿಣಾಮಕಾರಿ ಹೋರಾಟ ಮಾಡಲು ಅವಕಾಶ ಸಿಕ್ಕಿರಲಿಲ್ಲ. ಕಯ್ಯಾರರು ನಿಧನರಾಗುವವರೆಗೂ ಕಾಸರಗೋಡು ಕರ್ನಾಟಕಕ್ಕೆ ಸೇರಬೇಕು ಎಂದು ಆಗ್ರಹಿಸುತ್ತ ಹೋರಾಡಿದ್ದರು.

ಗೋವಿಂದ ಪೈಯವರ ಹೆಸರು ಸೇರಿಸಿರುವುದಕ್ಕೆ ಆಕ್ಷೇಪ ಇಲ್ಲ. ಆದರೆ ಕಯ್ಯಾರರ ಹೆಸರು ತೆಗೆದು ಬಂಟ ಸಮುದಾಯಕ್ಕೆ ಅವಮಾನ ಮಾಡಲಾಗಿದೆ. ಕಯ್ಯಾರರು ಬಂಟರ ಹೆಮ್ಮೆ. ಅವರಿಗೆ ಮಾಡುವ ಅವಮಾನ ಬಂಟ ಸಮುದಾಯಕ್ಕೆ ಮಾಡುವ ಅನ್ಯಾಯವಾಗುತ್ತದೆ ಎಂದು ಹರೀಶ್ ಶೆಟ್ಟಿ ಹೇಳಿದ್ದಾರೆ.

ಇದೇ 30ರಂದು ಬಂಟ್ಸ್ ಹಾಸ್ಟೆಲ್‌ನ ಅಮೃತೋತ್ಸವ ಕಟ್ಟಡದ ಸಭಾಂಗಣದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಕಾರ್ಯಕಾರಿ ಸಮಿತಿ ಸಭೆ ನಡೆಯಲಿದ್ದು ಅಲ್ಲಿ ಈ ಕುರಿತು ನಿರ್ಣಯ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು