ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿಸಿ ಕಚೇರಿಯಲ್ಲಿ ಡೆಂಗಿ ಜಾಗೃತಿ

Last Updated 16 ಮೇ 2022, 15:33 IST
ಅಕ್ಷರ ಗಾತ್ರ

ಮಂಗಳೂರು: ರಾಷ್ಟ್ರೀಯ ಡೆಂಗಿ ದಿನದ ಅಂಗವಾಗಿ ಸೋಮವಾರ ನಗರದ ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿ 100ಕ್ಕೂ ಅಧಿಕ ಕಚೇರಿ ಸಿಬ್ಬಂದಿಗೆ ಡೆಂಗಿ ಮತ್ತು ಮಲೇರಿಯಾ ಕುರಿತಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಜಾಗೃತಿ ಮೂಡಿಸಿದರು.

ಜಿಲ್ಲಾಧಿಕಾರಿ ಕಚೇರಿ ಕಟ್ಟಡದ ವಿವಿಧ ಇಲಾಖೆಗಳ ಸಿಬ್ಬಂದಿ, ಕಚೇರಿ ಆವರಣದ ಸುತ್ತಮುತ್ತ ಮಳೆ ನೀರು ಸಂಗ್ರಹವಾಗುವ ಸ್ಥಳಗಳ ಸ್ವಚ್ಛತೆ, ನೀರಿನ ಬಾಟಲಿಗಳು (ಪ್ಲಾಸ್ಟಿಕ್), ಹಸಿ ಕಸಗಳನ್ನು ಆಯ್ದು ತೆಗೆಯುವ ಮೂಲಕ ಸ್ವಚ್ಛಗೊಳಿಸಿದರು.

ಸಾರ್ವಜನಿಕರು ತಮ್ಮ ಮನೆಯ ಸುತ್ತಮುತ್ತ ಮಳೆ ನೀರು ಸಂಗ್ರಹವಾಗದಂತೆ ಎಚ್ಚರಿಕೆ ವಹಿಸುವ ಮೂಲಕ ಡೆಂಗಿ ಮತ್ತು ಮಲೇರಿಯಾ ನಿಯಂತ್ರಣಕ್ಕೆ ಕೈಜೋಡಿಸುವಂತೆ ಜಿಲ್ಲಾಡಳಿತದಿಂದ ವಿನಂತಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT