ಮಂಗಳೂರು: ಡೆಂಗಿ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣದ ದೃಷ್ಟಿಯಿಂದ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ರಾಷ್ಟ್ರೀಯ ಡೆಂಗಿ ದಿನಾಚರಣೆಯ ಅಂಗವಾಗಿ ಶುಕ್ರವಾರ ನಗರದ ಹೊಯ್ಗೆ ಬಜಾರ್ನಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಡೆಂಗಿ ಪ್ರಕರಣಗಳು ಕಡಿಮೆ ಸಂಖ್ಯೆಯಲ್ಲಿ ಪತ್ತೆಯಾಗಿವೆ. ಸಾರ್ವಜನಿಕರ ಸಹಕಾರದಿಂದ ಮಾತ್ರ ಡೆಂಗಿ ಸೇರಿದಂತೆ ಸಾಂಕ್ರಾಮಿಕ ರೋಗಗಳಿಗೆ ಕಡಿವಾಣ ಹಾಕಲು ಸಾಧ್ಯ. ಪ್ರತಿಯೊಬ್ಬರೂ ತಮ್ಮ ಮನೆಯ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಲು ಆದ್ಯತೆ ನೀಡಬೇಕು ಎಂದರು.

ಡೆಂಗಿಗೆ ಕಾರಣವಾಗುವ ಸೊಳ್ಳೆ ಸ್ವಚ್ಛ ನೀರಿನಲ್ಲಿಯೇ ಹುಟ್ಟುವುದರಿಂದ ಸಾರ್ವಜನಿಕರು ನೀರು ನಿಲ್ಲದಂತೆ ಮುನ್ನೆಚ್ಚರಿಕೆ ವಹಿಸಬೇಕು. ಈ ಬಗ್ಗೆ ಜಾಗೃತಿ ಕಾರ್ಯವೂ ಆಗಬೇಕು. ಆರೋಗ್ಯ ಇಲಾಖೆಯ ಅಧಿಕಾರಿಗಳು ಡೆಂಗಿ ನಿಯಂತ್ರಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ ಎಂದು ಸಚಿವರು ಹೇಳಿದರು.

ಸಚಿವರು ಹೊಯ್ಗೆ ಬಜಾರ್ನ ಧೂಮಾವತಿ ಕಾಂಪೌಂಡ್ ವ್ಯಾಪ್ತಿಯಲ್ಲಿ ನಡೆದ ಲಾರ್ವ ಸಮೀಕ್ಷೆಯಲ್ಲಿ ಪಾಲ್ಗೊಂಡರು. ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಚ್.ಆರ್ ತಿಮ್ಮಯ್ಯ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.