ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡೆಂಗೆ: ಮುನ್ನೆಚ್ಚರಿಕೆ ಕ್ರಮಕ್ಕೆ ಸೂಚನೆ

ಸಾಂಕ್ರಾಮಿಕ ರೋಗಗಳ ನಿಯಂತ್ರಣ ಕುರಿತ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ
Last Updated 12 ಮೇ 2022, 15:59 IST
ಅಕ್ಷರ ಗಾತ್ರ

ಮಂಗಳೂರು: ಮಳೆಗಾಲ ಪ್ರಾರಂಭವಾದ ನಂತರ ಡೆಂಗೆ ರೋಗ ಕಂಡುಬರುವ ಸಾಧ್ಯತೆ ಇರುವುದರಿಂದ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿವಿಧ ಸಾಂಕ್ರಾಮಿಕ ರೋಗಗಳ ನಿಯಂತ್ರಣ ಕುರಿತಂತೆ ಗುರುವಾರ ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಅವರು ಮಾತನಾಡಿದರು.

ಡೆಂಗೆಗೆ ಕಾರಣವಾದ ಈಡಿಸ್ ಸೊಳ್ಳೆಗಳು ಹಗಲು ಹೊತ್ತಿನಲ್ಲಿ ಕಚ್ಚುವುದರಿಂದ ವೃದ್ಧರು, ಗರ್ಭಿಣಿಯರು ಹಾಗೂ ಮಕ್ಕಳು ಸೊಳ್ಳೆ ಪರದೆಯನ್ನು ಕಡ್ಡಾಯವಾಗಿ ಬಳಸಬೇಕು ಅಥವಾ ಸೊಳ್ಳೆ ಬತ್ತಿ, ಮುಲಾಮು, ಇತ್ಯಾದಿ ಸೊಳ್ಳೆ ನಿರೋಧಕಗಳನ್ನು ಉಪಯೋಗಿಸುವುದು ಉತ್ತಮ. ಈಡಿಸ್ ಲಾರ್ವಾ ಸಮೀಕ್ಷೆಗಾಗಿ ಮನೆಗೆ ಭೇಟಿ ನೀಡುವ ಆರೋಗ್ಯ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರಿಗೆ ಸಾರ್ವಜನಿಕರು ಸಹಕಾರ ನೀಡಬೇಕು. ಆರೋಗ್ಯ ಇಲಾಖೆ ಸಿಬ್ಬಂದಿ ನೀಡುವ ಸಲಹೆಗಳನ್ನು ಪಾಲಿಸಬೇಕು ಎಂದು ಸಲಹೆ ನೀಡಿದರು.

ಬಂದರು ಪ್ರದೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಲೇರಿಯಾ, ಡೆಂಗೆ ಪ್ರಕರಣಗಳು ವರದಿಯಾಗುತ್ತಿದ್ದು, ಅಲ್ಲಿ ತಂಗಿರುವ ಬೋಟ್‍ಗಳಲ್ಲಿ ನೀರು ನಿಂತು ಸೊಳ್ಳೆ ಉತ್ಪತ್ತಿಯಾಗುತ್ತದೆ. ಬೋಟ್ ಮಾಲೀಕರು ಮತ್ತು ಮೀನುಗಾರರಿಗೆ ಕೀಟಜನ್ಯ ರೋಗ ನಿಯಂತ್ರಣದ ಮಾಹಿತಿ ನೀಡಬೇಕು ಎಂದುಮೀನುಗಾರಿಕೆ ಇಲಾಖೆಗೆ ಅಧಿಕಾರಿಗೆ ಸೂಚಿಸಿದರು.

ಸಮಾಜ ಕಲ್ಯಾಣ ಇಲಾಖೆ ವತಿಯಿಂದ ವಸತಿ ನಿಲಯ, ವಿದ್ಯಾರ್ಥಿ ನಿಲಯಗಳಿಗೆ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಐ.ಆರ್.ಎಸ್. ಮಾಡಿಸಬೇಕು. ಜಿಲ್ಲೆಯ ಕಲ್ಲುಕೋರೆಗಳ ಮಾಲೀಕರು ಕೀಟಜನ್ಯ ರೋಗ ನಿಯಂತ್ರಣ ಹಾಗೂ ಕೋರೆಗಳಲ್ಲಿ ಗಪ್ಪಿ ಮೀನುಗಳನ್ನು ಬಿಡಲು ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳು ಸೂಚನೆ ನೀಡಬೇಕು. ಸ್ಮಾರ್ಟ್ ಸಿಟಿ ಕಾಮಗಾರಿಗಳಿಗೆ ಬಳಸುವ ನೀರಿನಲ್ಲಿ ಸೊಳ್ಳೆ ಉತ್ಪತ್ತಿಯಾಗದಂತೆ ಲೋಕೋಪಯೋಗಿ ಇಲಾಖೆ ಕ್ರಮ ವಹಿಸಬೇಕು ಎಂದು ಸೂಚಿಸಿದರು.

ಜಿಲ್ಲಾ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಅಧಿಕಾರಿ ಡಾ. ಕಿಶೋರ್, ವೆನ್ಲಾಕ್ ಆಸ್ಪತ್ರೆಯ ಅಧೀಕ್ಷಕ ಡಾ. ಸದಾಶಿವ ಶಾನುಭೋಗ, ಲೇಡಿಗೋಷನ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ದುರ್ಗಾ ಪ್ರಸಾದ್, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ. ನವೀನ್ ಚಂದ್ರ ಕುಲಾಲ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT