ಮಂಗಳೂರು: ಕಿನ್ನಿಗೋಳಿಯಲ್ಲಿ ಮಹಿಳೆಯೊಬ್ಬರು ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ರಿಕ್ಷಾ ಡಿಕ್ಕಿ ಹೊಡೆದು ಬಿದ್ದಿದ್ದು, ತಾಯಿ ರಿಕ್ಷಾದ ಅಡಿಯಲ್ಲಿ ಸಿಲುಕಿದ್ದನ್ನು ಕಂಡ ಪುತ್ರಿ ವೈಭವಿ, ತಕ್ಷಣ ಓಡಿ ಬಂದು ತಾಯಿಯನ್ನು ರಕ್ಷಣೆ ಮಾಡಿದ್ದಾರೆ. ಏಳನೇ ತರಗತಿಯಲ್ಲಿ ಓದುತ್ತಿರುವ ಈ ಬಾಲಕಿಯ ಕಾರ್ಯವನ್ನು ಮೆಚ್ಚಿ, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ತಮ್ಮ ಕಚೇರಿಗೆ ಕರೆಸಿಕೊಂಡು ಸನ್ಮಾನಿಸಿದರು.