ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಧರ್ಮಸ್ಥಳದಿಂದ 404 ಶಾಲೆಗಳಿಗೆ 3,472 ಜತೆ ಡೆಸ್ಕ್-ಬೆಂಚ್‌ ವಿತರಣೆ

Published 4 ನವೆಂಬರ್ 2023, 13:29 IST
Last Updated 4 ನವೆಂಬರ್ 2023, 13:29 IST
ಅಕ್ಷರ ಗಾತ್ರ

ಉಜಿರೆ: ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳನ್ನು ಉಳಿಸಿ, ಬೆಳೆಸಲು ಧರ್ಮಸ್ಥಳದಿಂದ ಪೂರ್ಣ ಸಹಕಾರ, ಮಾರ್ಗದರ್ಶನ ಮತ್ತು ಪ್ರೋತ್ಸಾಹ ನೀಡಲಾಗುವುದು. ಈ ಮೂಲಕ ಕನ್ನಡ ನಾಡು-ನುಡಿ, ಸಂಸ್ಕೃತಿ ರಕ್ಷಣೆಯ ಅರಿವು, ಜಾಗೃತಿ ಮೂಡಿಸಲಾಗುವುದು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಹೇಳಿದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಹಾಸನ, ಮಂಡ್ಯ, ಮೈಸೂರು, ರಾಮನಗರ ಮತ್ತು ಚಾಮರಾಜನಗರ ಜಿಲ್ಲೆಗಳ 404 ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳಿಗೆ 3472 ಜತೆ ಡೆಸ್ಕ್-ಬೆಂಚ್‌ಗಳನ್ನು ಧರ್ಮಸ್ಥಳದಲ್ಲಿ ಶನಿವಾರ ವಿತರಿಸಿ ಅವರು ಮಾತನಾಡಿದರು.

ಡೆಸ್ಕ್–ಬೆಂಚ್‌ ನೀಡುವ ಯೋಜನೆಗೆ ₹2.5 ಕೋಟಿ ವಿನಿಯೋಗಿಸಿದ್ದು, ಸುಮಾರು 18 ಸಾವಿರ ವಿದ್ಯಾರ್ಥಿಗಳಿಗೆ ಪ್ರಯೋಜನವಾಗಲಿದೆ. ಜ್ಞಾನದೀಪಶಿಕ್ಷಣ ಕಾರ್ಯಕ್ರಮದಡಿಯಲ್ಲಿ 1003 ಸ್ವಯಂ-ಸೇವಕ ಶಿಕ್ಷಕ, ಶಿಕ್ಷಕಿಯರನ್ನು ಸರ್ಕಾರಿ ಶಾಲೆಗಳಿಗೆ ನಿಯೋಜನೆ ಮಾಡಲಾಗಿದೆ. ಶಾಲಾ ಕಟ್ಟಡ ನಿರ್ಮಾಣ, ಕುಡಿಯುವ ನೀರಿನ ವ್ಯವಸ್ಥೆ, ವಿದ್ಯುತ್ ಸಂಪರ್ಕ, ಶೌಚಾಲಯ ನಿರ್ಮಾಣ, ಆಟದ ಮೈದಾನ ನಿರ್ಮಾಣಕ್ಕೆ ಇದುವರೆಗೆ ₹ 13.01 ಕೋಟಿ ಅನುದಾನ ನೀಡಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಅಭಿನಂದನೆ: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಉಜಿರೆ ಎಸ್‌ಡಿಎಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗವಿಜ್ಞಾನ ಕಾಲೇಜಿನ ಪ್ರಾಂಶುಪಾಲ ಡಾ.ಪ್ರಶಾಂತ್ ಶೆಟ್ಟಿ, ಸಮಾಜ ಸೇವಕ ಚಾರ್ಮಾಡಿ ಹಸನಬ್ಬ ಅವರನ್ನು ಅಭಿನಂದಿಸಲಾಯಿತು.

ಹೇಮಾವತಿ ವೀ.ಹೆಗ್ಗಡೆ, ಎಸ್‌ಡಿಎಂ ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯ ಸ್ಥಾಪಕ ವೈದ್ಯಾಧಿಕಾರಿ ಡಾ.ರುದ್ರಪ್ಪ, ಡಾ.ದೀಪಿಕಾ ಶೆಟ್ಟಿ, ಕಾರ್ಯನಿರ್ವಾಹಕ ನಿರ್ದೇಶಕ ಡಾ.ಎಲ್.ಎಚ್.ಮಂಜುನಾಥ್, ಮುಖ್ಯನಿರ್ವಹಣಾಧಿಕಾರಿ ಅನಿಲ್‌ಕುಮಾರ್, ಪ್ರಾದೇಶಿಕ ಹಣಕಾಸು ನಿರ್ದೇಶಕ ಶಾಂತಾರಾಮ ಪೈ ಇದ್ದರು.

ಯೋಜನಾಧಿಕಾರಿ ಜಯಾನಂದ ಸ್ವಾಗತಿಸಿದರು. ಸಮುದಾಯ ಅಭಿವೃದ್ಧಿ ವಿಭಾಗದ ಪ್ರಾದೇಶಿಕ ನಿರ್ದೇಶಕ ಆನಂದ ಸುವರ್ಣ ವಂದಿಸಿದರು.

ಧರ್ಮಸ್ಥಳದಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಾ.ಪ್ರಶಾಂತ್‌ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು
ಧರ್ಮಸ್ಥಳದಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಾ.ಪ್ರಶಾಂತ್‌ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು
ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅವರು 404 ಶಾಲೆಗಳಿಗೆ ಡೆಸ್ಕ್-ಬೆಂಚ್‌ಗಳನ್ನು ವಿತರಿಸಿದರು
ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅವರು 404 ಶಾಲೆಗಳಿಗೆ ಡೆಸ್ಕ್-ಬೆಂಚ್‌ಗಳನ್ನು ವಿತರಿಸಿದರು
ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅವರು 404 ಶಾಲೆಗಳಿಗೆ ಡೆಸ್ಕ್-ಬೆಂಚ್‌ಗಳನ್ನು ವಿತರಿಸಿದರು
ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅವರು 404 ಶಾಲೆಗಳಿಗೆ ಡೆಸ್ಕ್-ಬೆಂಚ್‌ಗಳನ್ನು ವಿತರಿಸಿದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT