ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ವತಿಯಿಂದ ಚಾವಡಿ ತಮ್ಮನದ ಗೌರವ ಸಮರ್ಪಣೆಯನ್ನು ಪಾರಂಪರಿಕ ಕೈ ಮಗ್ಗ ಕುಶಲಕರ್ಮಿ ದೇವಕಿ ಶೆಟ್ಟಿಗಾರ್ ಅವರಿಗೆ ನೀಡಲಾಗುವುದು.

ಜೂ.21ರಂದು ಬೆಳಿಗ್ಗೆ 10.30 ಗಂಟೆಗೆ ಕಿನ್ನಿಗೋಳಿಯ ತಾಳಿಪಾಡಿ ನೇಕಾರರ ಸೌಧದಲ್ಲಿ ನಡೆಯುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ತುಳು ಅಕಾಡೆಮಿಯ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ವಹಿಸುವರು. ಎ.ಬಿ ಶೆಟ್ಟಿ ದಂತ ವೈದ್ಯಕೀಯ ಸಂಸ್ಥೆಯ ಅಸೋಸಿಯೇಟ್ ಡೀನ್ ಅಮರಶ್ರೀ ಅಮರನಾಥ ಶೆಟ್ಟಿ ಚಾವಡಿ ತಮ್ಮನ ನಡೆಸಿಕೊಡುವರು. ಕಿನ್ನಿಗೋಳಿಯ ಅನಂತ ಪ್ರಕಾಶ ಸಂಪಾದಕ ಕೊಡೆತ್ತೂರು ಸಚ್ಚಿದಾನಂದ ಉಡುಪ, ಸಾಹಿತಿ ಪ್ರಭಾಕರ ನೀರುಮಾರ್ಗ, ತುಳು ಪರಿಷತ್ ಅಧ್ಯಕ್ಷ ಶುಭೋದಯ ಆಳ್ವ ಹಾಗೂ ತಾಳಿಪಾಡಿ ಪ್ರಾಥಮಿಕ ನೇಕಾರರ ಸೇವಾ ಸಂಘದ ಅಧ್ಯಕ್ಷೆ ರುಕ್ಮಿಣಿ ಶೆಟ್ಟಿಗಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಕದಿಕೆ ಟ್ರಸ್ಟ್ ಅಧ್ಯಕ್ಷೆ ಮಮತಾ ರೈ ಅಭಿನಂದನಾ ಭಾಷಣ ಮಾಡುವರು ಎಂದು ತುಳು ಅಕಾಡೆಮಿಯ ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.