ಬುಧವಾರ, 28 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಕ್ಕಳ ಏಳಿಗೆ: ಶಿಕ್ಷಕರ ಪಾತ್ರ ಅಪಾರ– ಸುದೀಪ್ ಅಮೀನ್

Published 11 ಡಿಸೆಂಬರ್ 2023, 12:57 IST
Last Updated 11 ಡಿಸೆಂಬರ್ 2023, 12:57 IST
ಅಕ್ಷರ ಗಾತ್ರ

ಬಜಪೆ: ಮಕ್ಕಳ ಸರ್ವತೋಮುಖ ಏಳಿಗೆಗೆ ಪ್ರಾಮಾಣಿಕವಾಗಿ ಶ್ರಮಿಸುವ ಶಿಕ್ಷಕ ವೃಂದದಿಂದ ಬಡಗ ಎಕ್ಕಾರು ಸರ್ಕಾರಿ ಪ್ರೌಢಶಾಲೆ ಪ್ರಸಿದ್ಧವಾಗಿದೆ ಎಂದು ಎಸ್‌ಡಿಎಂಸಿ ಅಧ್ಯಕ್ಷ ಸುದೀಪ್ ಅಮೀನ್ ಹೇಳಿದರು.

ಬಡಗ ಎಕ್ಕಾರು ಸರ್ಕಾರಿ ಪ್ರೌಢಶಾಲೆ ವಾರ್ಷಿಕೋತ್ಸವ ಉದ್ಘಾಟನೆ ಹಾಗೂ ಬಹುಮಾನ ವಿತರಣೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು.

ಮುಚ್ಚೂರು - ನೀರುಡೆ ಲಯನ್ಸ್ ಕ್ಲಬ್ ಮಾಜಿ ಅಧ್ಯಕ್ಷ ಸ್ಟ್ಯಾನ್ಲಿ ಮಿರಾಂದ ಮಾತನಾಡಿ, ಶೈಕ್ಷಣಿಕ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ಸರ್ಕಾರಿ ಶಾಲೆ ವಿದ್ಯಾರ್ಥಿಗಳ ಸಾಧನೆ ಉನ್ನತ ಮಟ್ಟದಲ್ಲಿದೆ ಎಂದರು.

ವಿವಿಧ ವಿಭಾಗಗಳಲ್ಲಿ ನಡೆದ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಎಕ್ಕಾರು ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರವೀಣ್ ಆಚಾರ್ಯ, ಉಪಾಧ್ಯಕ್ಷೆ ಪದ್ಮಾಕ್ಷಿ, ಎಸ್‌ಡಿಎಂಸಿ ಮಾಜಿ ಅಧ್ಯಕ್ಷೆ ನಾಗರತ್ನ, ಉದ್ಯಮಿ ವೀರೇಂದ್ರ ಸುವರ್ಣ, ಕಟೀಲು ಕಾಲೇಜಿನ ನಿವೃತ್ತ ಪ್ರಾಂಶುಪಾಲ ಉಮೇಶ್ ರಾವ್ ಎಕ್ಕಾರ್, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮನಿಶ್‌,
ಎಸ್‌ಡಿಎಂಸಿ ಸದಸ್ಯರಾದ ಸುರೇಶ್, ಹರಿಶ್ಚಂದ್ರ ಶೆಟ್ಟಿ, ಶಾರದಾ, ಎಕ್ಕಾರು ಗ್ರಾಪಂ ಮಾಜಿ ಅಧ್ಯಕ್ಷ ಸುರೇಶ್ ಶೆಟ್ಟಿ ಎಕ್ಕಾರ್, ಪಂಚಾಯಿತಿ ಸದಸ್ಯರಾದ ವಿಕ್ರಮ್ ಮಾಡ, ಸತೀಶ್ ಶೆಟ್ಟಿ, ಅನಿಲ್ ಭಾಗವಹಿಸಿದ್ದರು.

ಮುಖ್ಯ ಶಿಕ್ಷಕಿ ಇಂದಿರಾ ಎನ್.ರಾವ್ ಸ್ವಾಗತಿಸಿದರು. ಶಿಕ್ಷಕಿ ಚಿತ್ರಾಶ್ರೀ ನಿರೂಪಿಸಿದರು. ದೈಹಿಕ ಶಿಕ್ಷಣ ಶಿಕ್ಷಕಿ ವಿದ್ಯಾಲತಾ ವಂದಿಸಿದರು.

ಬಡಗ ಎಕ್ಕಾರು ಸರ್ಕಾರಿ ಪ್ರೌಢಶಾಲೆ ವಾರ್ಷಿಕೋತ್ಸವ ನಡೆಯಿತು
ಬಡಗ ಎಕ್ಕಾರು ಸರ್ಕಾರಿ ಪ್ರೌಢಶಾಲೆ ವಾರ್ಷಿಕೋತ್ಸವ ನಡೆಯಿತು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT