ಶುಕ್ರವಾರ, ಜೂಲೈ 3, 2020
22 °C

ಧರ್ಮಸ್ಥಳದಲ್ಲಿ ಭಕ್ತರ ಗಡಣ: ಮಂಜುನಾಥ ಸ್ವಾಮಿಗೆ ವಿಶೇಷ ಪೂಜೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಜಿರೆ (ದಕ್ಷಿಣ ಕನ್ನಡ ಜಿಲ್ಲೆ): ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸೋಮವಾರ ನಾಡಿನ ವಿವಿಧೆಡೆಯಿಂದ ಬಂದ ಸಾವಿರಾರು ಭಕ್ತರು ದೇವರ ದರ್ಶನ ಪಡೆದರು.

ಹೆಚ್ಚಿನವರು ಸಂಪ್ರದಾಯದಂತೆ ನೇತ್ರಾವತಿ ಸ್ನಾನಘಟ್ಟದಲ್ಲಿ ನದಿ ಸ್ನಾನ ಮಾಡಿ ನಡೆದುಕೊಂಡು ದೇವಸ್ಥಾನಕ್ಕೆ ಬಂದರು.

ಸರ್ಕಾರದ ಮಾರ್ಗಸೂಚಿ, ನಿಯಮಗಳ ಪ್ರಕಾರ ಮಾಸ್ಕ್ ಧಾರಣೆ, ಅಂತರ ಕಾಪಾಡುವುದು ಮೊದಲಾದ ನಿಯಮಗಳನ್ನು ದೇವಸ್ಥಾನದಲ್ಲಿ, ಅನ್ನಪೂರ್ಣ ಭೋಜನಾಲಯದಲ್ಲಿ ಹಾಗೂ ಹೆಗ್ಗಡೆಯವರ ಬೀಡಿನಲ್ಲಿ (ನಿವಾಸ) ಪಾಲಿಸಲಾಗಿದೆ.

ದೇವರ ದರ್ಶನದ ಬಳಿಕ ಭಕ್ತರು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾದರು. ಧರ್ಮಸ್ಥಳದಲ್ಲಿ ಸೋಮವಾರ ವಿಶೇಷ ದಿನವಾದುದರಿಂದ ಭಕ್ತರ ಸಂಖ್ಯೆ ಅಧಿಕವಾಗಿದೆ.


ದೇಗುಲದ ಸಿಬ್ಬಂದಿಗೆ ಭಕ್ತರಿಗೆ ಹ್ಯಾಂಡ್ ಸ್ಯಾನಿಟೈಸರ್ ಹಾಕಿದರು

 


ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ದೇಗುಲಕ್ಕೆ ಭೇಟಿ ನೀಡಿದ್ದರು.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು